ಶಿಮ್ಲಾ : ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿ 7 ಮಂದಿ ಸಾವನ್ನಪ್ಪಿದ್ದು, 12 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಹರೋಲಿಯ ತಹ್ಲಿವಾಲ್ ನಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಈ ದುರ್ಘಟನೆ ನಡೆದಿದೆ. ಕಾರ್ಖಾನೆಯಲ್ಲಿ ಭಾರಿ ಶಬ್ದದೊಂದಿಗೆ ಸ್ಫೋಟ ಸಂಭವಿಸಿದೆ. ಸ್ಫೋಟದ ಪರಿಣಾಮ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದವರ ಪೈಕಿ 7 ಮಂದಿ ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಉನಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಧಾವಿಸಿ ಬೆಂಕಿ ನಂದಿಸಿದ್ದಾರೆ. ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.










