ಪಠ್ಯಪುಸ್ತಕದಿಂದ ನಾರಾಯಣಗುರು ಪಾಠ ಕೈಬಿಡುವ ಪ್ರಶ್ನೆಯೇ ಇಲ್ಲ : ಕೋಟ.

56
firstsuddi

ಬೆಂಗಳೂರು : ಪಠ್ಯಪುಸ್ತಕದಲ್ಲಿ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸ್ಪಷ್ಟಪಡಿಸಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಪಠ್ಯ ಪುಸ್ತಕ ಗೊಂದಲ ಕುರಿತು ಸಮಾಲೋಚನೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಾಥಮಿಕ ಮತ್ತು ಪ್ರೌಢಶಾಲೆ ಪಠ್ಯದಲ್ಲಿ ನಾರಾಯಣಗುರು ಪಠ್ಯ ಕೈಬಿಟ್ಟಿದ್ದಾರೆ ಎಂಬುದು ಸುಳ್ಳು. ಈಗಾಗಲೇ ಮುಖ್ಯಮಂತ್ರಿಗಳನ್ನು ಹಾಗೂ ಶಿಕ್ಷಣ ಸಚಿವ ನಾಗೇಶ್ ಅವರನ್ನು ಭೇಟಿಯಾಗಿ ಈ ಕುರಿತು ಮಾತನಾಡಿದ್ದೇನೆ. ಸ್ಪಷ್ಟವಾಗಿ ಹೇಳ್ತೇನೆ ನಾರಾಯಣಗುರು ಪಠ್ಯ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.