ಪತನಗೊಂಡ ಸೇನಾ ಹೆಲಿಕಾಪ್ಟರ್‌ನ ಬ್ಲ್ಯಾಕ್ ಬಾಕ್ಸ್ ಪತ್ತೆ!

68
firstsuddi

ಚೆನ್ನೈ : ತಮಿಳುನಾಡಿನ ಕೂನೂರು ಬಳಿ ಪತನವಾದ ಸೇನಾ ಹೆಲಿಕಾಪ್ಟರ್ ನ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದೆ.

ವಿಂಗ್ ಕಮಾಂಡರ್ ಆರ್.ಭಾರದ್ವಾಜ್ ನೇತೃತ್ವದ ತಂಡ ದುರಂತ ನಡೆದ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ವೇಳೆ ಹೆಲಿಕಾಪ್ಟರ್ನ ಬ್ಲ್ಯಾಕ್ ಬಾಕ್ಸ್ ಒಂದು ಪತ್ತೆಯಾಗಿದ್ದು, ವಶಕ್ಕೆ ಪಡೆದುಕೊಳ್ಳಲಾಗಿದೆ. ಹೆಲಿಕಾಪ್ಟರ್ಗೆ ಸಂಬಂಧಿಸಿದ ಹಲವಾರು ಮಾಹಿತಿಗಳು ಆ ಬ್ಲ್ಯಾಕ್ ಬಾಕ್ಸ್ ನಲ್ಲಿ ಲಭ್ಯವಿರುತ್ತದೆ. ಇದರಿಂದ ದುರಂತಕ್ಕೆ ನಿಖರ ಕಾರಣ ದೊರಕುವ ಸಾಧ್ಯತೆ ಇದೆ.

ನಿನ್ನೆ ತಮಿಳುನಾಡಿನ ನೀಲಗಿರಿ ಅರಣ್ಯ ವ್ಯಾಪ್ತಿಯ (ಕೂನೂರು ಬಳಿ) ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್, ಪತ್ನಿ ಸೇರಿದಂತೆ 13 ಮಂದಿ ಮೃತಪಟ್ಟಿದ್ದಾರೆ. ಮತ್ತೊಂದೆಡೆ, ಬದುಕುಳಿದಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರಿಗೆ ವೆಲ್ಲಿಂಗ್ಟನ್ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.