ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತ್ನಿ ; ತನ್ನ ಇಬ್ಬರು ಮಕ್ಕಳೊಂದಿಗೆ ನೇಣಿಗೆ ಶರಣು…

65
firstsuddi

ಮೈಸೂರು : ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತ್ನಿ ತನ್ನ ಇಬ್ಬರು ಮಕ್ಕಳಿಗೆ ನೇಣು ಬಿಗಿದು ಆಕೆಯು ನೇಣಿಗೆ ಶರಣಾಗಿರುವ ಘಟನೆ ತಿ.ನರಸೀಪುರ ತಾಲೂಕಿನ ರಾಮೇಗೌಡನಪುರ ಗ್ರಾಮದಲ್ಲಿ ನಡೆದಿದೆ.

ಸರೋಜ (32) ಆತ್ಮಹತ್ಯೆಗೆ ಶರಣಾಗಿರುವ ಗೃಹಿಣಿ. ಗೀತಾ(6), ಕುಸುಮಾ(4) ಮೃತ ಮಕ್ಕಳು. ಸರೋಜ ತಿ‌.ನರಸೀಪುರ ತಾಲೂಕಿನ ಮಾವಿನಹಳ್ಳಿ ಗ್ರಾಮದ ನಿಂಗರಾಜು ಜೊತೆ ವಿವಾಹವಾಗಿದ್ದರು. ಆದರೆ ಗಂಡ ನಿಂಗರಾಜುಗೆ ಅಕ್ರಮ ಸಂಬಂಧ ಇರುವ ವಿಷಯಕ್ಕೆ ಪದೇ ಪದೇ ಗಲಾಟೆ ಆಗುತ್ತಿತ್ತು.

ಕೆಲ ದಿನಗಳ ಹಿಂದೆ ಸರೋಜ ಗಂಡನ ಮನೆಯಿಂದ ಸ್ವಗ್ರಾಮ ರಾಮೇಗೌಡನಪುರಕ್ಕೆ ಆಗಮಿಸಿದ್ದರು. ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣಿಗೆ ಶರಣಾಗಿದ್ದಾರೆ. ಸದ್ಯ ಮೃತ ದೇಹಗಳನ್ನು ತಿ.ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.