ಪತಿ ಹಾಗೂ ಆತನ ಗರ್ಲ್ ಫ್ರೆಂಡ್ ವಿರುದ್ದ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಪತ್ನಿ…

90
firstsuddi

ಬೆಂಗಳೂರು: ಪತಿ ಹಾಗೂ ಆತನ ಗರ್ಲ್ ಫ್ರೆಂಡ್ ವಿರುದ್ದ ಡೆತ್ ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ.

ಹೆಗ್ಗನಹಳ್ಳಿ ನಿವಾಸಿ ಪವಿತ್ರಾ ಎನ್ನುವ ಮಹಿಳೆ, ಡೆತ್ ನೋಟ್ ಬರೆದಿಟ್ಟು ವಾಟ್ಸಾಪ್ ಸ್ಟೇಟಸ್ ಹಾಕಿ ನೇಣಿಗೆ ಶರಣಾಗಿದ್ದಾಳೆ. ಮೃತ ಪವಿತ್ರಾ ಮೊದಲ ಪತಿಗೆ ವಿಚ್ಚೇದನ ನೀಡಿ, ಚೇತನ್ ಗೌಡ ಎಂಬಾತನನ್ನು ಎರಡನೇ ಮದುವೆಯಾಗಿದ್ದಳು. ಪವಿತ್ರಾಳ ಎರಡನೇ ಪತಿ ಚೇತನ್ ಗೌಡ ಉದ್ಯಮಿಯಾಗಿದ್ದು, ಪವಿತ್ರ ಚೇತನ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಳು. ಇತ್ತೀಚೆಗೆ ಮತ್ತೊರ್ವ ಯುವತಿಯ ವಿಚಾರವಾಗಿ ಪತಿ-ಪತ್ನಿ ಮಧ್ಯೆ ಜಗಳವಾಗ್ತಿತ್ತು. ಈ ಬಗ್ಗೆ ಪವಿತ್ರ ತನ್ನ ತಾಯಿ ಪದ್ಮಮ್ಮ ಬಳಿ ತಿಳಿಸಿದ್ದಳು. ಕಡೆಗೆ ಮನನೊಂದು ಡೆತ್ ನೋಟ್ ವಾಟ್ಸಾಪ್ ಸ್ಟೇಟಸ್ ಹಾಕಿ ನೇಣಿಗೆ ಶರಣಾಗಿದ್ದಾಳೆ.

ಮಗಳ ವಾಟ್ಸಾಪ್ ಸ್ಟೇಟಸ್ ನಲ್ಲಿ ಡೆತ್ ನೋಟ್ ನೋಡಿ ತಾಯಿ ಮನೆ ಬಳಿ ಬಂದಾಗ ಪವಿತ್ರಾ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಇದೀಗ ಮೃತಳ ತಾಯಿ ಪದ್ಮಮ್ಮರ ದೂರಿನ ಮೇರೆಗೆ ಕೆಂಗೇರಿ ಠಾಣೆಯಲ್ಲಿ ಚೇತನ್ ಗೌಡ ಹಾಗೂ ಮತ್ತೊರ್ವ ಯುವತಿ ವಿರುದ್ದ ಐಪಿಸಿ 306 ಆತ್ಮಹತ್ಯೆ ಪ್ರಚೋದನೆ ಅಡಿ ದೂರು ದಾಖಲಾಗಿದೆ.