ಕಾರವಾರ : ಬ್ಯಾಂಕ್ನ ಸಹಾಯಕ ವ್ಯವಸ್ಥಾಪಕನೊಬ್ಬ ಬ್ಯಾಂಕಿನ ಖಾತೆಯಿಂದ ತನ್ನ ಪತ್ನಿ ಖಾತೆಗೆ 2.69 ಕೋಟಿ ರೂ. ವರ್ಗಾವಣೆ ಮಾಡಿ ನಾಪತ್ತೆಯಾಗಿದ್ದಾನೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣದ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ಸಹಾಯಕ ವ್ಯವಸ್ಥಾಪಕನಾಗಿರುವ ಆಂಧ್ರಪ್ರದೇಶ ಮೂಲದ ಕುಮಾರ ಕೃಷ್ಣಮೂರ್ತಿ ಬೋನಾಲ ಎಂಬಾತ ಕಳೆದ ಏಪ್ರಿಲ್ 7 ರಿಂದ ಸೆ.9 ರವರೆಗಿನ ಅವಧಿಯಲ್ಲಿ ಬ್ಯಾಂಕ್ ಸಿಬ್ಬಂದಿಯ ಲಾಗಿನ್ ಐಡಿಯನ್ನು ಅವರ ಗಮನಕ್ಕೆ ಬಾರದಂತೆ ಉಪಯೋಗಿಸಿಕೊಂಡು ಆಂಧ್ರದ ಚಿರಲಾದ ಎಸ್ ಬಿಐ ಬ್ಯಾಂಕ್ ನಲ್ಲಿ ಖಾತೆ ಹೊಂದಿರುವ ಪತ್ನಿ ರೇವತಿ ಪ್ರಿಯಾಂಕ ಗೊರ್ರೆಯ ಖಾತೆಗೆ 2.69 ಕೋಟಿ ರೂ. ವರ್ಗಾವಣೆ ಮಾಡಿ ನಾಪತ್ತೆಯಾಗಿದ್ದಾನೆ.
ಈ ಕುರಿತು ಶಾಖಾ ವ್ಯವಸ್ಥಾಪಕ ವಿಘ್ನೇಶ್ವರ ಭಟ್ಟ ದೂರು ನೀಡಿದ್ದಾರೆ. ಆದರೆ ಸದ್ಯ ಆರೋಪಿ ನಾಪತ್ತೆಯಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.










