ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಮನನೊಂದು ಇಬ್ಬರು ಮಕ್ಕಳಿಗೆ ವಿಷ ನೀಡಿ ಆತ್ಮಹತ್ಯೆಗೆ ಶರಣಾದ ಪತಿ…

270
firstsuddi

ಬೆಳಗಾವಿ : ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಮನನೊಂದು ಪತಿ ತನ್ನ ಇಬ್ಬರು ಮಕ್ಕಳಿಗೆ ವಿಷ ನೀಡಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಯಾದಗೂಡ ಗ್ರಾಮದಲ್ಲಿ ನಡೆದಿದೆ. ತಮ್ಮಣ್ಣ ಗಿಡ್ಡಾಳೆ(38), ಮಗಳು ಚಿನ್ನು ಗಿಡ್ಡಾಳೆ(2) ಹಾಗೂ ಮಗ ನಿರಂಜನ ಗಿಡ್ಡಾಳೆ(10) ಮೃತ ದುದೈವಿಗಳು ಎಂದು ಗುರುತಿಸಲಾಗಿದೆ. ಕೌಟುಂಭಿಕ ಕಲಹ ಹಿನ್ನೆಲೆ ಪತಿಯೊಂದಿಗೆ ಕೋಪಿಸಿಕೊಂಡು ಪತ್ನಿ ತನ್ನ ಇಬ್ಬರು ಮಕ್ಕಳನ್ನು ಬಿಟ್ಟು ತನ್ನ ತವರು ಮನೆಗೆ ತೆರಳಿದ್ದರು. ಇದರಿಂದ ಮನನೊಂದ ಪತಿ ನಿನ್ನೆ ರಾತ್ರಿ ತನ್ನ ಇಬ್ಬರು ಮಕ್ಕಳಿಗೆ ವಿಷವನ್ನು ನೀಡಿ ಬಳಿಕ ತಾನೂ ಕೂಡಾ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಹುಕ್ಕೇರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳಿಯ ಆಸ್ಪತ್ರೆಗೆ ಸಾಗಿಸಿದ್ದಾರೆ.