ಪರೀಕ್ಷಾ ಕೇಂದ್ರದಲ್ಲಿ ಥರ್ಮಲ್ ಸ್ಕ್ರೀನಿಂಗ್ ವೇಳೆ ಕುಸಿದು ಬಿದ್ದ SSLC ವಿದ್ಯಾರ್ಥಿನಿ…

254
firstsuddi

ಚಾಮರಾಜನಗರ : ಇಂದಿನಿಂದ ರಾಜ್ಯಾದ್ಯಂತ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಆರಂಭವಾಗಿದ್ದು, ಹೀಗಾಗಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿನಿಯೊಬ್ಬರು ಥರ್ಮಲ್ ಸ್ಕ್ರೀನಿಂಗ್ ಮಾಡುವ ವೇಳೆ ಕುಸಿದು ಬಿದ್ದಿರುವ ಘಟನೆ ಚಾಮರಾಜನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ. ಬೀಬಿ ಹಾಜೀರ ಎಂಬ ವಿದ್ಯಾರ್ಥಿನಿ ಪರೀಕ್ಷಾ ಕೇಂದ್ರದ ಬಳಿ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ. ವಿದ್ಯಾರ್ಥಿನಿ ಪರೀಕ್ಷಾ ಕೇಂದ್ರಕ್ಕೆ ಬರುವುದಕ್ಕೂ ಮೊದಲೇ ಮನೆ ಬಳಿ ಬಿದ್ದು ಹಣೆಗೆ ಗಾಯ ಮಾಡಿಕೊಂಡಿದ್ದು, ಬಳಿಕ ಪೋಷಕರೊಂದಿಗೆ ಆಸ್ಪತ್ರೆಗೆ ತೆರಳಿ ಪರೀಕ್ಷಾ ಕೇಂದ್ರಕ್ಕೆ ಬಂದಾಗ ಥರ್ಮಲ್ ಸ್ಕ್ರೀನಿಂಗ್ ಮಾಡುವ ವೇಳೆ ಮತ್ತೊಮ್ಮೆ ಕುಸಿದು ಬಿದ್ದಿದ್ದು, ಬಳಿಕ ವಿದ್ಯಾರ್ಥಿನಿಗೆ ಸ್ಥಳದಲ್ಲೇ ಇದ್ದ ಆರೋಗ್ಯ ಸಹಾಯಕಿಯಿಂದ ಚಿಕಿತ್ಸೆ ಕೊಡಿಸಲಾಗಿದೆ.