ಪರೀಕ್ಷೆಯ ದಿನವೇ ಎಸ್​ಎಸ್​ಎಲ್​ಸಿ ವಿದ್ಯಾರ್ಥಿ ಆತ್ಮಹತ್ಯೆ…

38
firstsuddi

ಶಿವಮೊಗ್ಗ: ಪರೀಕ್ಷೆಯ ದಿನವೇ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಸಾಗರ ತಾಲೂಕು ಆನಂದಪುರಂ ಬಳಿಯ ಯಡೇಹಳ್ಳಿ ಗ್ರಾಮದಲ್ಲಿ ನಡೆದಿದೆ.

ಪರಶುರಾಮ್ ಬಾಬು ಆಂದೋಳ್ಳಿ (15) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಆನಂದಪುರದ ಕೆಪಿಎಸ್‍ಸಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ, ಚೆನ್ನಾಗಿಯೇ ಓದುತ್ತಿದ್ದ. ಪರೀಕ್ಷೆಗೆ ಎಲ್ಲಾ ಸಿದ್ಧತೆಯನ್ನೂ ಮಾಡಿಕೊಂಡಿದ್ದ. ಆದ್ರೆ ಕೊನೇ ಕ್ಷಣದಲ್ಲಿ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಆನಂದಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.