ಪರೇಶ್ ಮೇಸ್ತಾ ಪ್ರಕರಣವನ್ನು ಮತ್ತೆ ಸಿಬಿಐಗೆ ಒಪ್ಪಿಸುವಂತೆ ಸಿಎಂಗೆ ಮನವಿ…

55
firstsuddi

ಬೆಂಗಳೂರು : ಪರೇಶ್ ಮೇಸ್ತಾ ಸಾವಿನ ಪ್ರಕರಣವನ್ನು ಮತ್ತೆ ಸಿಬಿಐ ಮೂಲಕ ತನಿಖೆ ಮಾಡಿಸುವಂತೆ ಆತನ ತಂದೆ ಕಮಲಾಕರ್ ಮೇಸ್ತಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದರು.

ವಿಧಾನಸೌಧದಲ್ಲಿ ಸಿಎಂ ಭೇಟಿಯಾದ ಕಮಲಾಕರ್ ಮೆಸ್ತಾ, ನನ್ನ ಮಗ ಪರೇಶ್ ಮೆಸ್ತಾನ ಸಾವು ಅಸಹಜ ಸಾವಾಗಿದ್ದು, ಸಿಬಿಐ ಸಾಕ್ಷಾಧಾರಗಳು ಲಭ್ಯ ಆಗಿಲ್ಲ ಎಂಬ ಕಾರಣಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದು, ಇದರಿಂದ ನನಗೆ ನ್ಯಾಯ ವಂಚನೆ ಆಗಿದೆ. ನನ್ನ ಮಗ ಪರೇಶ್ ಮೆಸ್ತಾನ ಪ್ರಕರಣವನ್ನು ಸಿಬಿಐಗೆ ನೀಡುವಾಗ 4 ತಿಂಗಳ ಅವಧಿ ಮೀರಿದ್ದು, ಬಹುತೇಕ ಸಾಕ್ಷಾಧಾರಗಳು ನಾಶ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ಮತ್ತಷ್ಟು ಆಳವಾದ ತನಿಖೆ ಮಾಡಬೇಕಾದ ಅವಶ್ಯಕತೆ ಇರುವುದರಿಂದ ಮತ್ತೆ ಸಿಬಿಐ ತನಿಖೆಗೆ ಆದೇಶ ನೀಡಬೇಕೆಂದು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದರು.

ಕಮಾಲಕರ್ ಮೆಸ್ತಾ ಅವರ ಮನವಿಯನ್ನು ಆಲಿಸಿದ ಮುಖ್ಯಮಂತ್ರಿಗಳು, ತಂದೆಯಾಗಿ ನಿಮ್ಮ ಕಷ್ಟ ಸರ್ಕಾರ ಅರ್ಥಮಾಡಿಕೊಳ್ಳುತ್ತದೆ. ಮನವಿಯನ್ನು ಪರಿಶೀಲಿಸಿ, ಪುನರ್ ತನಿಖೆಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕಾರ್ಮಿಕ ಸಚಿವರಾದ ಶಿವರಾಮ್ ಹೆಬ್ಬಾರ್, ಮೀನುಗಾರಿಗಾ ಸಚಿವರಾದ ಎಸ್.ಅಂಗಾರ, ಶಾಸಕರಾದ ದಿನಕರ್ ಶೆಟ್ಟಿ, ಸುನಿಲ್ ನಾಯಕ್ ಹಾಗೂ ಕುಮಾರ ನಾರಾಯಣ ಮಾರ್ಕಾಂಡೇ ಅವರು ಜೊತೆಯಲ್ಲಿ ಇದ್ದರು.