ಪಲ್ಟಿಯಾಗಿ ಹೊತ್ತಿ ಉರಿದ ಕಾರು, ಐವರು ಸಜೀವ ದಹನ…

384
firstsuddi

ತೆಲಂಗಾಣ : ಕಾರು ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡು ಐವರು ಸ್ಥಳದಲ್ಲೇ ಸಜೀವ ದಹನವಾಗಿರುವ ಘಟನೆ ಚಿತ್ತೂರು ಜಿಲ್ಲೆಯ ಗಂಗಾವರಂ ಬಳಿ ನಡೆದಿದೆ. ಬೆಂಗಳೂರು ಮೂಲದ ಜಾಹ್ನವಿ, ಕಲಾ, ಪವನ್, ರಾಮ್ , ಸಾಯಿ ಆಶ್ರಿತ್ ಮತ್ತು ವಿಷ್ಣು ಎಂಬುವವರು ಕಾರಿನಲ್ಲಿ ಬೆಂಗಳೂರಿನಿಂದ ಪಲುಮನೇರುಗೆ ತೆರಳುತ್ತಿದ್ದ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗೆ ಉರುಳಿ ಬಿದ್ದ ಪರಿಣಾಮ ಕಾರಿನ ಇಂಜಿನ್ ಸ್ಪೋಟಗೊಂಡು ಬೆಂಕಿ ಹೊತ್ತಿಕೊಂಡು ಉರಿದಿದೆ. ಕಾರಿಗೆ ಬೆಂಕಿ ಬಿದ್ದಿದ್ದನ್ನು ಗಮನಿಸಿದ ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿ ಓರ್ವನನ್ನು ಉಳಿಸಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರಿನಲ್ಲಿದ್ದ ಉಳಿದ ಐವರು ಸಜೀವ ದಹನವಾಗಿದ್ದಾರೆ.