ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಮಮತಾ ಬ್ಯಾನರ್ಜಿ ಪ್ರಮಾಣ ವಚನ ಸ್ವೀಕಾರ…

105
firstsuddi

ಕೊಲ್ಕತ್ತಾ : ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ತೃಣಮೂಲ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ಮಮತಾ ಬ್ಯಾನರ್ಜಿ ಅವರು ಸತತ ಮೂರನೇ ಬಾರಿಗೆ ಸಿಎಂ ಗದ್ದುಗೆಗೇರುತ್ತಿದ್ದಾರೆ. ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಮತಾ ಬ್ಯಾನರ್ಜಿಯವರಿಗೆ ರಾಜ್ಯಪಾಲ ಜಗದೀಪ್ ಧನ್ಕರ್ ಅವರು ಪ್ರಮಾಣ ವಚನ ಬೋಧಿಸಿದರು.