ಪಾಕಿಸ್ತಾನದಲ್ಲಿ ಭಾರೀ ಏರಿಕೆ ಕಂಡ ಪೆಟ್ರೋಲ್, ಡೀಸೆಲ್ ಬೆಲೆ…

42
firstsuddi

ಇಸ್ಲಾಮಾಬಾದ್ : ಪಾಕಿಸ್ತಾನವು ಆರ್ಥಿಕ ದಿವಾಳಿಯತ್ತ ಸಾಗುತ್ತಿದೆ. ನಿನ್ನೆ ರಾತ್ರೋ ರಾತ್ರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಭಾರೀ ಏರಿಕೆ ಕಂಡಿದೆ. ಪೆಟ್ರೋಲ್ ಬೆಲೆ 22.20 ರೂ. ದಿಢೀರ್ ಏರಿಕೆ ಮಾಡಿದ್ದು, ಪ್ರತಿ ಲೀಟರ್ ಪೆಟ್ರೋಲ್ ಬೆಲೆ ಗರಿಷ್ಠ 272 ರೂ.ಗಳಿಗೆ ತಲುಪಿದೆ.

ಡಾಲರ್ ಎದುರು ಪಾಕಿಸ್ತಾನದ ರೂಪಾಯಿ ಅಪಮೌಲ್ಯದಿಂದಾಗಿ ಬೆಲೆ ಏರಿಕೆ ಮಾಡಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಇದರೊಂದಿಗೆ ಹೈಸ್ಪೀಡ್ ಡೀಸೆಲ್ ಬೆಲೆಯನ್ನು ಲೀಟರ್ ಗೆ 17.20 ರೂ.ಗೆ ಹೆಚ್ಚಿಸಿದ್ದು, ಪ್ರತಿ ಲೀಟರ್ ಡೀಸೆಲ್ ಬೆಲೆ 280 ರೂ.ಗೆ ಹೆಚ್ಚಳವಾಗಿದೆ. ಬುಧವಾರ ಮಧ್ಯರಾತ್ರಿ 12 ಗಂಟೆಯಿಂದಲೇ ಈ ನಿಯಮ ಜಾರಿಗೆ ಬಂದಿವೆ.

ಸದ್ಯ ಎಎಂಎಫ್ ಕಠಿಣ ನಿಯಮಗಳ ನಡುವೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮತ್ತಷ್ಟು ಹಣದುಬ್ಬರಕ್ಕೆ ಕಾರಣವಾಗಬಹುದು ಎಂದು ಅರ್ಥಶಾಸ್ತ್ರಜ್ಞರು ಆತಂಕಪಟ್ಟಿದ್ದಾರೆ.

ಪಾಕಿಸ್ತಾನದ ವಿದೇಶಿ ವಿನಿಮಯ ಮೀಸಲು ಶ್ರೀಲಂಕಾದಂತೆ ಬಹುತೇಕ ಖಾಲಿಯಾಗಿದೆ. ಆಹಾರ ಪದಾರ್ಥಗಳಿಂದ ಹಿಡಿದು ಪೆಟ್ರೋಲಿಯಂ ಉತ್ಪನ್ನಗಳವರೆಗೆ ಎಲ್ಲವನ್ನೂ ಆಮದು ಮಾಡಿಕೊಳ್ಳಲು ಪಾಕಿಸ್ತಾನಕ್ಕೆ ಸಾಧ್ಯವಾಗುತ್ತಿಲ್ಲ.