ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಮಲ್ಲಿಕಾರ್ಜುನ ಖರ್ಗೆಗೆ ಕೊರೊನಾ ಪಾಸಿಟಿವ್…

64
firstsuddi

ಬೆಂಗಳೂರು : ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆಗೆ ಕೋವಿಡ್-19ಸೋಂಕು ದೃಢಪಟ್ಟಿದೆ.

ಜನವರಿ 9ರಂದು ಮೇಕೆದಾಟು ಪಾದಯಾತ್ರೆಗೆ ಚಾಲನೆ ನೀಡಿ ವೇದಿಕೆಯಲ್ಲಿ ಭಾಷಣ ಮಾಡಿದ್ದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೊರೊನಾ ಎ ಸಿಂಪ್ಟಮ್ಯಾಟಿಕ್ ಸೋಂಕು ತಗುಲಿದೆ. ಇದೀಗ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ಹೋಂ ಐಸೋಲೇಶನ್ ನಲ್ಲಿದ್ದಾರೆ.

ಈಗಾಗಲೇ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಸಿಎಂ ಇಬ್ರಾಹಿಂ, ಮೊಯ್ಲಿ, ಮಲ್ಲಾಜಮ್ಮ, ಶಿವಶಂಕರ್ ರೆಡ್ಡಿ ಸೇರಿದಂತೆ ಹಲವರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಅಲ್ಲದೇ ಮೇಕೆದಾಟು ಪಾದಯಾತ್ರೆಯನ್ನು ತಕ್ಷಣ ನಿಲ್ಲಿಸುವಂತೆ ಹೈಕೋರ್ಟ್ ಆದೇಶ ನೀಡಿದೆ.

ಇತ್ತ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಇಂದು ರಾಮನಗರ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ಹಿರಿಯ ಮುಖಂಡರು, ಶಾಸಕರು, ಸಂಸದರೊಂದಿಗೆ ತುರ್ತು ಸಭೆ ನಡೆಸುತ್ತಿದ್ದಾರೆ. ಈ ಸಭೆಯ ಬಳಿಕ ಪಾದಯಾತ್ರೆ ಬಗ್ಗೆ ಮುಂದಿನ ನಿರ್ಧಾರ ಹೊರಬೀಳಲಿದೆ.