ಪಾಸಿಟಿವಿಟಿ ರೇಟ್ ನೋಡಿಕೊಂಡು ಶಾಲೆ ಬಂದ್ ಮಾಡುವ ನಿರ್ಧಾರ ಆಯಾ ಜಿಲ್ಲಾಧಿಕಾರಿಗಳಿಗೆ ಅಧಿಕಾರ : ಬಿ.ಸಿ. ನಾಗೇಶ್.

72
firstsuddi

ಬೆಂಗಳೂರು : ಕೊರೊನಾ ಪಾಸಿಟಿವಿಟಿ ರೇಟ್ ನೋಡಿಕೊಂಡು ರಾಜ್ಯದಲ್ಲಿ ಶಾಲೆಗಳನ್ನು ಬಂದ್ ಮಾಡುವ ನಿರ್ಧಾರದ ಬಗ್ಗೆ ಆಯಾ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಸಚಿವರು, ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಪ್ರತಿ ದಿನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಮ್ಮ ಜೊತೆ ನಿನ್ನೆ ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಿದ್ದಾರೆ. ಕೋವಿಡ್ ಪಾಸಿಟಿವಿಟಿ ರೇಟ್ ನಲ್ಲಿ ಮಕ್ಕಳ ಆರೋಗ್ಯ ನೋಡಿಕೊಂಡು ತೀರ್ಮಾನ ಕೈಗೊಳ್ಳಲು ಸೂಚಿಸಿದ್ದಾರೆ ಎಂದರು.

ಕೊರೊನಾದಿಂದ ಕಳೆದ ಒಂದೂವರೆ ವರ್ಷದಲ್ಲಿ ಮಕ್ಕಳ ಶಿಕ್ಷಣದ ಮೇಲೆ ಸಾಕಷ್ಟು ಪರಿಣಾಮವಾಗಿದೆ. ಹೀಗಾಗಿ ಈ ಬಾರಿ ಶಾಲೆಗಳನ್ನು ಬಂದ್ ಮಾಡದೇ, ಜಾಗರೂಕತೆಯಿಂದ ನಡೆಸಬೇಕೆಂದು ಸಿಎಂ ಸಲಹೆ ನೀಡಿದ್ದಾರೆ. ಬೆಂಗಳೂರು ನಗರದಲ್ಲಿ ಸೋಂಕಿನ ಪ್ರಮಾಣವು ನಿತ್ಯ 10 ಸಾವಿರದ ಗಡಿ ದಾಟುತ್ತಿದೆ. 10, 11, 12ನೇ ತರಗತಿ ವಿದ್ಯಾರ್ಥಿಗಳಿಗೆ ಸೊಂಕು ತಗುಲಿಲ್ಲ, ಎಲ್ಲ ಸುರಕ್ಷತಾ ಕ್ರಮಗಳೊಂದಿಗೆ ಈ ತರಗತಿಗಳನ್ನು ನಡೆಸಲಾಗುತ್ತಿದೆ.

ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಬೆಂಗಳೂರು ನಗರ, ಬೆಳಗಾವಿ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಶಾಲೆಗಳನ್ನು ಬಂದ್ ಮಾಡಲಾಗಿದೆ. ಬೆಂಗಳೂರಿನಲ್ಲಿ ರಜೆ ವಿಸ್ತರಣೆಯಾಗುವ ಸಾಧ್ಯತೆ ಇದ್ದು, ತಾಂತ್ರಿಕ ಸಲಹಾ ಸಮಿತಿಯು ಸರ್ಕಾರಕ್ಕೆ ನಿರ್ಧಾರ ತಿಳಿಸಲಿದೆ. ನಿನ್ನೆ ತನಕ 1 ಸಾವಿರ ಮಕ್ಕಳಿಗೆ ಕೋವಿಡ್ ಸೋಂಕು ತಗುಲಿದೆ. ಈಗಾಗಲೇ ರಾಜಧಾನಿಯಲ್ಲಿ ಅತಿ ಹೆಚ್ಚು ಮಕ್ಕಳಿಗೆ ಸೋಂಕು ತಗುಲಿದೆ. ಎಂದರು.