ಪಿಎಸ್‍ಐ ಅಕ್ರಮ ನೇಮಕಾತಿ : ಬಿಜೆಪಿ ಶಾಸಕನ ಆಪ್ತನಿಂದ ಪ್ರಧಾನಿ ಕಚೇರಿಗೆ ದೂರು…

60
firstsuddi

ವಿಜಯಪುರ : ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣವನ್ನ ಸಿಬಿಐ ತನಿಖೆಗೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ಆಪ್ತರೊಬ್ಬರು ಪ್ರಧಾನಿ ಕಚೇರಿಗೆ ದೂರು ಸಲ್ಲಿಸಿದ್ದಾರೆ.

ರಾಜ್ಯದಲ್ಲಿರುವ ಸರ್ಕಾರ ಭ್ರಷ್ಟವಾಗಿದ್ದು, ಪೊಲೀಸ್ ಇಲಾಖೆ ಅಲ್ಲದೆ ಬೇರೆ ಇಲಾಖೆಯಲ್ಲೂ ಅಕ್ರಮ ನಡೆದಿದೆ ಎಂದು ಯತ್ನಾಳ್ ಬೆಂಬಲಿಗ ರಾಘವ ಅಣ್ಣಿಗೇರಿ ಎಂಬುವವರು ಆರೋಪಿಸಿದ್ದಾರೆ. ಪರೋಕ್ಷವಾಗಿ ಪ್ರಕರಣದಲ್ಲಿ ಇನ್ನೂ ದೊಡ್ಡವರ ಕೈವಾಡ ಇದೆ. ರಾಜ್ಯದಲ್ಲಿ ಭ್ರಷ್ಟ ಸರ್ಕಾರವಿದ್ದು, ಜನರು ರೋಸಿ ಹೋಗಿದ್ದಾರೆ. ಪೊಲೀಸ್ ಇಲಾಖೆ ಮಾತ್ರವಲ್ಲದೆ ಲೋಕೋಪಯೋಗಿ ಹಾಗೂ ನೀರಾವರಿ ಇಲಾಖೆಯಲ್ಲೂ ಭ್ರಷ್ಟಾಚಾರ ನಡೆದಿದೆ. ಈ ಬಗ್ಗೆ ಹಲವು ದೂರುಗಳು ಕೇಳಿ ಬಂದಿವೆ. ಹೀಗಾಗಿ ಇವುಗಳ ಬಗ್ಗೆಯೂ ತನಿಖೆ ಮಾಡಬೇಕು ಎಂದು ರಾಘವ ಅಣ್ಣೀಗೇರಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಕಳೆದ ವಾರವಷ್ಟೇ ಪ್ರಕರಣದ ಆರೋಪಿ ದಿವ್ಯಾ ಅವರಿಗೆ ಮಾಜಿ ಸಿಎಂ ಬೆಂಬಲ ಇದೆ ಎಂದು ಯತ್ನಾಳ್ ಆರೋಪಿಸಿದ್ದರು. ಇದೀಗ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ಆಪ್ತರಿಂದಲೇ ಪ್ರಧಾನಿ ಕಚೇರಿಗೆ ದೂರು ಸಲ್ಲಿಕೆಯಾಗಿರೋದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.