ಬೆಂಗಳೂರು : ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ ಬೆನ್ನಲ್ಲೇ ನೇಮಕಾತಿ ವಿಭಾಗದಲ್ಲಿನ 12 ಮಂದಿಯನ್ನು ವರ್ಗಾವಣೆ ಮಾಡಲಾಗಿದೆ. 17 ಅಧಿಕಾರಿಗಳು ಮತ್ತು ಸಿಬ್ಬಂದಿಗಳಲ್ಲಿ 12 ಮಂದಿ ವರ್ಗಾವಣೆ ಮಾಡಿ ನೇಮಕಾತಿ ವಿಭಾಗದ ಎಡಿಜಿಪಿ ಹಿತೇಂದ್ರ ಆದೇಶ ಹೊರಡಿಸಿದ್ದಾರೆ.
ಹಿತೇಂದ್ರ ಎಡಿಜಿಪಿ ಆಗಿ ವರ್ಗಾವಣೆಗೊಂಡ ಬಳಿಕ ಸಾಮೂಹಿಕ ವರ್ಗಾವಣೆ ಪ್ರಕ್ರಿಯೆ ಆರಂಭವಾಗಿದೆ. ಸದ್ಯಕ್ಕೆ ಕಚೇರಿ ಕರ್ತವ್ಯ ನಿರ್ವಹಣೆಗಾಗಿ 5 ಜನರನ್ನು ಉಳಿಸಿಕೊಳ್ಳಲಾಗಿದೆ. ಖಾಲಿ ಇರುವ 12 ಸ್ಥಾನಕ್ಕೆ ಹೊಸಬರು ಬಂದ ಬಳಿಕ ಉಳಿದ ಐವರ ಬದಲಾವಣೆಯಾಗುವ ಸಾಧ್ಯತೆಯಿದೆ.










