ಪಿಎಸ್‍ಐ ನೇಮಕಾತಿ ಅಕ್ರಮ ಕೇಸ್ ; ಇಂದೂ ಕೂಡ ಮುಂದುವರಿದ ಅಭ್ಯರ್ಥಿಗಳ ವಿಚಾರಣೆ…

34
firstsuddi

ಬೆಂಗಳೂರು : ಪಿಎಸ್‍ಐ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಸಿಐಡಿ ತಂಡ ಅಭ್ಯರ್ಥಿಗಳ ವಿಚಾರಣೆ ಮುಂದುವರೆಸಿದೆ. ನಿನ್ನೆ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಅಧಿಕಾರಿಗಳು ಒಟ್ಟು 50 ಅಭ್ಯರ್ಥಿಗಳಿಗೆ ನೋಟಿಸ್ ನೀಡಿದ್ದರು. ಈ ಪೈಕಿ 45 ಜನ ಅಭ್ಯರ್ಥಿಗಳು ಮಾತ್ರ ವಿಚಾರಣೆಗೆ ಹಾಜರಾಗಿದ್ದರು. ಸತತ 3 ಗಂಟೆಗೂ ಅಧಿಕ ಕಾಲ ನಿನ್ನೆ ವಿಚಾರಣೆ ನಡೆಸಲಾಗಿದೆ.

ಇಂದೂ ಕೂಡ 50 ಅಭ್ಯರ್ಥಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ಸಿಆರ್​ಪಿಸಿ ಕಲಂ 91ರ ಅಡಿ ನೊಟೀಸ್ ನೀಡಲಾಗಿದ್ದು, ಪ್ರತಿ ಅಭ್ಯರ್ಥಿಯ ಪ್ರವೇಶ ಪತ್ರ ಪರಿಶೀಲಿಸಿ ವಿಚಾರಣೆ ನಡೆಯಲಿದೆ. 545 ಅಭ್ಯರ್ಥಿಗಳನ್ನು ಹಂತ ಹಂತವಾಗಿ ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ. ಒಟ್ಟು ಹತ್ತು ದಿನಗಳ ಕಾಲ ನಿರಂತರವಾಗಿ ಅಭ್ಯರ್ಥಿಗಳ ವಿಚಾರಣೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಸಿಐಡಿ ತನಿಖಾಧಿಕಾರಿ ನರಸಿಂಹ ಮೂರ್ತಿ ನೇತೃತ್ವದಲ್ಲಿ ಅಭ್ಯರ್ಥಿಗಳ ವಿಚಾರಣೆ ನಡೆಯುತ್ತಿದೆ.