ಪಿಯು ಕಾಲೇಜು ಸ್ಥಾಪನೆಗೆ ಮುಂದಾದ ಮುಸ್ಲಿಮರು.

72
firstsuddi

ಮುಂಗಳೂರು : ಹಿಜಾಬ್ ವಿವಾದದ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 13 ಮುಸ್ಲಿಂ ಆಡಳಿತ ಸಂಸ್ಥೆಗಳು ಪಿಯು ಕಾಲೇಜು ಸ್ಥಾಪನೆಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ.

ಈ ಬಾರಿ ಜಿಲ್ಲೆಯಲ್ಲಿ ಕಾಲೇಜು ಸ್ಥಾಪಿಸಲು ಅನುಮತಿ ಕೋರಿ ಪಿಯು ಬೋರ್ಡ್‍ಗೆ ಸುಮಾರು 14 ಅರ್ಜಿಗಳು ಸಲ್ಲಿಕೆಯಾಗಿದ್ದು, 14 ಅರ್ಜಿಗಳ ಪೈಕಿ 13 ಅರ್ಜಿಗಳು ಮುಸ್ಲಿಂ ಶಿಕ್ಷಣ ಸಂಸ್ಥೆಗಳಾದ್ದಾಗಿದೆ. ಈ 14 ಅರ್ಜಿಗಳಲ್ಲಿ ಎರಡು ಅರ್ಜಿಗಳಿಗೆ ಅನುಮತಿ ನೀಡಲಾಗಿದೆ.

ಒಂದು ಗುರುಪುರದ ಮುಸ್ಲಿಂ ಶಿಕ್ಷಣ ಸಂಸ್ಥೆಗೆ ಮತ್ತು ಇನ್ನೊಂದು ಸುಬ್ರಹ್ಮಣ್ಯದ ಮುಸ್ಲಿಮೇತರ ಶಿಕ್ಷಣ ಸಂಸ್ಥೆಗೆ ಅನುಮತಿ ಸಿಕ್ಕಿದೆ. ಉಳಿದ 12 ಮುಸ್ಲಿಂ ಆಡಳಿತದ ಕಾಲೇಜಿನ ಅನುಮತಿ ಅರ್ಜಿಗಳು ಬಾಕಿ ಉಳಿದಿವೆ.