ಪುಣೆ: ಯುವತಿ ಮೇಲೆ ಮೂವರಿಂದ ಸಾಮೂಹಿಕ ಅತ್ಯಾಚಾರ, ಆಕೆಯ ಸ್ನೇಹಿತನ ಮೇಲೂ ಹಲ್ಲೆ.

15
Woman hand sign for stop abusing violence, human trafficking, stop violence against women, Human is not a product. Stop women abuse, Human rights violations.

ಪುಣೆ: ಪುಣೆಯ ಹೊರವಲಯದಲ್ಲಿ 21 ವರ್ಷದ ಯುವತಿ ಮೇಲೆ ಮೂವರು ಅತ್ಯಾಚಾರವೆಸಗಿದ್ದು, ಆಕೆಯ ಸ್ನೇಹಿತನ ಮೇಲೂ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಬೋಪದೇವ್ ಘರ್ ಪ್ರದೇಶದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಅವರು ಹೇಳಿದ್ದಾರೆ. ಯುವತಿ ಮತ್ತು ಆಕೆಯ ಸ್ನೇಹಿತ ಗುರುವಾರ ತಡರಾತ್ರಿ ಬೋಪ್‍ದೇವ್ ಘರ್ ಪ್ರದೇಶಕ್ಕೆ ಹೋಗಿದ್ದರು. ಅಲ್ಲಿ ಮೂವರು ಅಪರಿಚಿತರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ” ಎಂದು ಪುಣೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಕಾಮುಕರನ್ನು ಪತ್ತೆಹಚ್ಚಲು ಹತ್ತು ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಪ್ರತ್ಯೇಕ ಸ್ಥಳದಲ್ಲಿ ಈ ಘಟನೆ ನಡೆದಿದ್ದು, ಆ ಮೂವರು ಯುವತಿಯ ಸ್ನೇಹಿತನ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ಕೊಂಧ್ವಾ ಪೊಲೀಸ್ ಠಾಣೆಯ ಪೋಲಿಸರು ತಿಳಿಸಿದ್ದಾರೆ.