ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ತೀವ್ರ ಪ್ರಮಾಣದಲ್ಲಿ ಹೃದಯಾಘಾತವಾಗಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಸದ್ಯ ನಟ ವಿಕ್ರಂ ಆಸ್ಪತ್ರೆಯಲ್ಲಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿಕ್ರಂ ಆಸ್ಪತ್ರೆಗೆ ಅನೇಕ ನಟರು ಸೇರಿದಂತೆ ಅಪಾರ ಅಭಿಮಾನಿಗಳು ಆಗಮಿಸುತ್ತಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಪುನೀತ್ ರಾಜ್ ಕುಮಾರ್ ಅವರ ನಿವಾಸದ ಬಳಿಯೂ ಭಾರೀ ಭದ್ರತೆ ಒದಗಿಸಲಾಗಿದೆ.
ಪುನೀತ್ ರಾಜ್ ಕುಮಾರ್ ಅವರಿಗೆ ಹೃದಯಾಘಾತವಾಗಿದ್ದು, ಅವರ ಆರೋಗ್ಯದ ಬಗ್ಗೆ ಇನ್ನೂ ಹೇಳುವುದಕ್ಕೆ ಆಗಲ್ಲ ಎಂದು ವಿಕ್ರಂ ಆಸ್ಪತ್ರೆ ವೈದ್ಯ ಡಾ. ರಂಗನಾಥ್ ತಿಳಿಸಿದ್ದಾರೆ. ಹೃದಯಾಘಾತ ಸಂಭವಿಸಿದ ನಂತರ ಪುನೀತ್ ನಿರ್ಲಕ್ಷಿಸಿದ್ದು, ಬೆಳಗ್ಗೆ 11.30 ಗಂಟೆ ವೇಳೆಗೆ ಆಸ್ಪತ್ರೆಗೆ ಬಂದಿದ್ದಾರೆ. ಬರುವಾಗ ಸ್ವಲ್ಪ ಸೀರಿಯಸ್ ಆಗಿತ್ತು. ನಮ್ಮ ಪ್ರಯತ್ನ ನಾವು ಮಾಡುತ್ತಿದ್ದೇವೆ. ತುರ್ತು ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಮಾಹಿತಿ ನೀಡಿದರು.










