ಪುಲ್ವಾಮಾದಲ್ಲಿ ಎನ್‍ಕೌಂಟರ್ – ಇಬ್ಬರು ಉಗ್ರರನ್ನು ಹೊಡೆದುರುಳಿದ ಭಾರತೀಯ ಸೇನೆ…

119
firstsuddi

ಶ್ರೀನಗರ : ಒಂದೆಡೆ ದೇಶದಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಿದ್ದರೆ, ಇನ್ನೊಂದೆಡೆ ಗಡಿಯಲ್ಲಿ ಉಗ್ರರ ಅಟ್ಟಹಾಸ ಹೆಚ್ಚಾಗುತ್ತಲೇ ಇದ್ದು, ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಯೋಧರು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಪುಲ್ವಾಮಾ ಜಿಲ್ಲೆಯ ಚೆವಾ ಉಲಾರ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿದ ಯೋಧರು ಕೂಡಲೇ ಸ್ಥಳವನ್ನು ಸುತ್ತುವರೆದು ನಿನ್ನೆ ಸಂಜೆಯಿಂದಲೇ ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ಉಗ್ರರು ಗುಂಡಿನ ಚಕಮಕಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ದಾಳಿ ನಡೆಸಿದ ಯೋಧರು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ.