ಪುಲ್ವಾಮಾದಲ್ಲಿ ಎನ್‍ಕೌಂಟರ್-ಓರ್ವ ಉಗ್ರನ ಸದೆಬಡಿದ ಸೇನೆ, ಓರ್ವ ಯೋಧ ಹುತಾತ್ಮ…

134
firstsuddi

ಶ್ರೀನಗರ : ಉಗ್ರರು ಹಾಗೂ ಯೋಧರ ನಡುವೆ ನಡೆದ ಎನ್‍ಕೌಂಟರ್‍ನಲ್ಲಿ ಭಾರತೀಯ ಸೇನೆ ಓರ್ವ ಉಗ್ರನನ್ನು ಹೊಡೆದುರುಳಿಸಿದ್ದು, ಈ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಜಮ್ಮು ಕಾಶ್ಮೀರಾದ ಪುಲ್ವಾಮ ಜಿಲ್ಲೆಯ ಗೂಸು ಗ್ರಾಮದಲ್ಲಿ ಮನೆಯೊಂದರಲ್ಲಿ ಉಗ್ರರು ಅಡಗಿರುವ ಮಾಹಿತಿಯನ್ನು ತಿಳಿದ ಪೊಲೀಸರು ಹಾಗೂ ಭದ್ರತಾ ಪಡೆಗಳು ನಿನ್ನೆ ರಾತ್ರಿಯಿಂದಲೇ ಜಂಟಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಈ ವೇಳೆ ಉಗ್ರರು ಇಂದು ಬೆಳಿಗ್ಗೆ ಯೋಧರತ್ತ ಗುಂಡಿನ ದಾಳಿ ನಡೆಸಿದ್ದು, ಈ ದಾಳಿಯಲ್ಲಿ ಯೋಧರನ್ನು ಓರ್ವ ಉಗ್ರನನ್ನು ಹೊಡೆದುರುಳಿಸಿದ್ದಾರೆ ಅಲ್ಲದೇ ಓರ್ವ ಯೋಧ ಉಗ್ರರ ಗುಂಡಿನ ದಾಳಿಗೆ ಹುತಾತ್ಮರಾಗಿದ್ದಾರೆ. ಹಾಗೂ ಓರ್ವ ಪೊಲೀಸ್ ಅಧಿಕಾರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರ್ಯಾಚರಣೆ ವೇಳೆ ಮೂವರು ಉಗ್ರರನ್ನು ಸೆರೆ ಹಿಡಿದಿದ್ದು, ಇವರು ಜೈಷ್-ಎ-ಮೊಹಮ್ಮದ್ ಸಂಘಟನೆಗೆ ಸೇರಿರುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.