ಪುಲ್ವಾಮಾದಲ್ಲಿ ಎನ್‍ಕೌಂಟರ್-ಮೂವರು ಉಗ್ರರ ಹತ್ಯೆ-ಓರ್ವ ಯೋಧ ಹುತಾತ್ಮ…

118
firstsuddi

ಶ್ರೀನಗರ : ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಎನ್‍ಕೌಂಟರ್‍ನಲ್ಲಿ ಭದ್ರತಾ ಪಡೆಗಳು ಮೂವರು ಉಗ್ರರನ್ನು ಹೊಡೆದುರುಳಿಸಿದ್ದು, ಓರ್ವ ಯೋಧ ಹುತಾತ್ಮರಾಗಿದ್ದಾರೆ. ಜಮ್ಮು ಕಾಶ್ಮೀರಾದ ಪುಲ್ವಾಮಾ ಜಿಲ್ಲೆಯ ಝಾದೂರ ಪ್ರದೇಶದಲ್ಲಿ ಉಗ್ರರು ಅಡಗಿರುವ ಮಾಹಿತಿ ತಿಳಿದ ಯೋಧರು ಉಗ್ರರು ಇರುವ ಸ್ಥಳವನ್ನು ಸುತ್ತುವರೆದು ಕಾರ್ಯಾಚರಣೆ ಆರಂಭಿಸಿದ್ದಾರೆ. ಈ ವೇಳೆ ಉಗ್ರರು ಯೋಧರತ್ತ ಗುಂಡಿನ ದಾಳಿ ನಡೆಸಿದ್ದು, ಉಗ್ರರ ದಾಳಿಗೆ ಪ್ರತಿಯಾಗಿ ದಾಳಿ ನಡೆಸಿದ ಯೋಧರು ಮೂವರು ಉಗ್ರರನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಾಗೂ ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಓರ್ವ ಯೋಧ ಹುತಾತ್ಮರಾಗಿದ್ದಾರೆ ಎಂದು ಸೇನಾ ಮೂಲಗಳಿಂದ ತಿಳಿದು ಬಂದಿದೆ.