ಪುಷ್ಪ 2 ಪ್ರೀಮಿಯರ್ ಶೋ ವೇಳೆ ಕಾಲ್ತುಳಿತ ಓರ್ವ ಮಹಿಳೆ ಸಾವು.

36

ಹೈದರಾಬಾದ್: ಸ್ಟರ್ ನಟ ಅಲ್ಲು ಅರ್ಜುನ್ ಅಭಿನಯದ ಪುಷ್ಪ 2 ಪ್ರೀಮಿಯರ್ ಶೋ ವೇಳೆ ಕಾಲ್ತುಳಿತ ಸಂಭವಿಸಿ ಓರ್ವ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ. ಹೈದರಾಬಾದ್‍ನ RTC ಕ್ರಾಸ್‌ರೋಡ್ಸ್  ನ ಸಂಧ್ಯಾ ಥಿಯೇಟರ್‌ನಲ್ಲಿ ಈ ದುರಂತ ಸಂಭವಿಸಿತು. ದಿಲ್‍ಸುಖ್‍ನಗರದ ರೇವತಿ ಮೃತ ಮಹಿಳೆ. ಪತಿ ಭಾಸ್ಕರ್ ಮತ್ತು ಇಬ್ಬರು ಮಕ್ಕಳೊಂದಿಗೆ ಕಾರ್ಯಕ್ರಮಕ್ಕೆ ಬಂದಿದ್ದರು. ರಾತ್ರಿ 10:30 ರ ಸುಮಾರಿಗೆ ಥಿಯೇಟರ್‌ನಲ್ಲಿ ಪ್ರೇಕ್ಷಕರು ಕಿಕ್ಕಿರಿದು ನೆರೆದಿದ್ದರು. ಸಿನಿಮಾ ಸ್ಕ್ರೀನಿಂಗ್‍ನಲ್ಲಿ ಅಲ್ಲು ಅರ್ಜುನ್ ಹಾಜರಿದ್ದರು. ಈ ವೇಳೆ ನೂಕುನುಗ್ಗಲು ಜಾಸ್ತಿಯಾಗಿ ಕಾಲ್ತುಳಿತ ಸಂಭವಿಸಿತು. ಪರಿಣಾಮವಾಗಿ 39 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಆಕೆಯ ಚಿಕ್ಕ ಮಗನ ಸ್ಥಿತಿ ಗಂಭೀರವಾಗಿದೆ.