ಪುಸ್ತಕ ಓದುವುದರಿಂದ ಮನುಷ್ಯನ ಜ್ಞಾನದ ಆಳ ವಿಸ್ತಾರವಾಗುವುದು-ಲೇಖಕಿ.ಡಾ.ಮಂಜುಳಾ.

25

ಚಿಕ್ಕಮಗಳೂರು: ಪುಸ್ತಕ ಓದುವುದರಿಂದ ಮನುಷ್ಯನ ಜ್ಞಾನದ ಆಳ-ಅಗಲ ವಿಸ್ತಾರವಾಗುವುದು ಎಂದು ಯುವ ಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ. ಲೇಖಕಿ.ಡಾ.ಮಂಜುಳಾ ಹುಲ್ಲಹಳ್ಳಿ ಹೇಳಿದರು ತಾಲೂಕಿನ ಬಿಳೇಕಲ್ಲಹಳ್ಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕುಂಭಕ ಸಾಂಸ್ಕೃತಿಕ ಪ್ರತಿಷ್ಠಾನ ಶುಕ್ರವಾರ ಹಮ್ಮಿಕೊಂಡಿದ್ದ ಗಾಯನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು ಓದುವುದು ಮತ್ತು ಬರೆಯುವುದು ಉತ್ತಮ ಹವ್ಯಾಸ. ಪುಸ್ತಕ ಸಂಸ್ಕೃತಿಯಿಂದ ಮನುಷ್ಯನಿಗೆ ಉತ್ತಮ ಸಂಸ್ಕಾರ ಸಿಕ್ಕಿ ಸಮಾಜದಲ್ಲಿ ಸಹಬಾಳ್ವೆಗೆ ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ, ಮೊರಾರ್ಜಿ ದೇಸಾಯಿ ವಸತಿ ನಿಲಯದ ಪ್ರಾಂಶುಪಾಲ ಕೆ.ಪಿ.ಶೈಲ ನಾಡು-ನುಡಿ ಹಾಗೂ ಸಂಸ್ಕೃತಿ ಕಟ್ಟುವ ಕಾರ್ಯದಲ್ಲಿ ಕುಂಭಕ ಸಾಂಸ್ಕೃತಿಕ ಪ್ರತಿಷ್ಠಾನವು ಜಿಲ್ಲೆಯಲ್ಲಿ ಮುಂಚೂಣಿಯಲ್ಲಿರುವ ಸಂಸ್ಥೆಯಾಗಿದೆ ಎಂದು ಶ್ಲಾಘಿಸಿದರು. ಶಾಲಾ-ಕಾಲೇಜುಗಳಲ್ಲಿ ಇಂತಹ ಸಾಹಿತ್ಯಿಕ ಚಟುವಟಿಕೆಗಳನ್ನು ಮಾಡುವುದರಿಂದ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿದಂತಾಗುತ್ತದೆ ಎಂದು ತಿಳಿಸಿದರು.