ಪೂರ್ವ ದೆಹಲಿಯ 68 ಮಂದಿ ಸಿ.ಆರ್.ಪಿ.ಎಫ್ ಯೋಧರಿಗೆ ಕೊರೊನಾ ಸೋಂಕು…

207
firstsuddi

ನವದೆಹಲಿ : ಪೂರ್ವ ದೆಹಲಿಯ 68 ಮಂದಿ ಸಿ.ಆರ್.ಪಿ.ಎಫ್ ಯೋಧರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು, ಈವರೆಗೆ 127 ಮಂದಿ ಸಿ.ಆರ್.ಪಿ.ಎಫ್ ಯೋಧರು ಮಹಾಮಾರಿ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ದೇಶಾದ್ಯಂತ ಲಾಕ್‍ಡೌನ್ ಆಗಿರುವ ಹಿನ್ನೆಲೆ, ಯೋಧರನ್ನು ದೆಹಲಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಪೂರ್ವ ದೆಹಲಿಯಲ್ಲಿರುವ ಸಿ.ಆರ್.ಪಿ.ಎಫ್‍ನ ಶಿಬಿರ ಕೇಂದ್ರದಲ್ಲಿರುವ 68 ಮಂದಿ ಯೋಧರಿಗೆ ಸೋಂಕು ಕಾಣಿಸಿಕೊಂಡಿದ್ದು, ದೇಶದಲ್ಲಿ ಒಟ್ಟು 127 ಮಂದಿ ಸಿ.ಆರ್.ಪಿ.ಎಫ್ ಯೋಧರು ಸೋಂಕಿಗೆ ತುತ್ತಾಗಿದ್ದಾರೆ. ಅವರಲ್ಲಿ ಓರ್ವ ಯೋಧ ಗುಣಮುಖರಾಗಿದ್ದು, ಮತ್ತೊಬ್ಬರು ಮೃತಪಟ್ಟಿದ್ದಾರೆ.