ಪೆಟ್ರೋಲ್, ಡೀಸೆಲ್ ಬೆಲೆ 40 ಪೈಸೆ ಇಳಿಕೆ – ಇಂದಿನಿಂದಲೇ ಹೊಸ ದರ ಜಾರಿ…

67
firstsuddi

ನವದೆಹಲಿ : ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ತುಸು ಇಳಿಕೆಯಾಗಿದ್ದು, ಇಂದಿನಿಂದ ಹೊಸ ದರ ಜಾರಿಗೆ ಬರಲಿದೆ. ಮೇ 22ರಂದು ಕೇಂದ್ರ ಸರ್ಕಾರವು ದೇಶಾದ್ಯಂತ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಇಳಿಕೆ ಮಾಡಿತ್ತು. ಇದಾದ ನಂತರ ಇದೀಗ 40 ಪೈಸೆ ಇಳಿಕೆ ಮಾಡಿದೆ.

ಬೆಂಗಳೂರಿನಲ್ಲಿ ಇಂದಿನ ಪೆಟ್ರೋಲ್ ದರ 101.52 ರೂ. ಆಗಿದೆ. ಡಿಸೇಲ್ ಬೆಲೆ 87.47 ರೂ. ಆಗಿದೆ. ದೆಹಲಿಯಲ್ಲಿ ಪೆಟ್ರೋಲ್ 96.65 ರೂ ಮತ್ತು ಡೀಸೆಲ್ ಲೀಟರ್ ಗೆ 89.82 ರೂ., ಮುಂಬೈನಲ್ಲಿ ಪೆಟ್ರೋಲ್ 106.31 ರೂ ಮತ್ತು ಡೀಸೆಲ್ ಲೀಟರ್ ಗೆ 94.27 ರೂ., ಚೆನ್ನೈನಲ್ಲಿ ಪೆಟ್ರೋಲ್ 102.63 ರೂ ಮತ್ತು ಡೀಸೆಲ್ ಲೀಟರ್ ಗೆ 94.24 ರೂ., ಕೋಲ್ಕತ್ತಾದಲ್ಲಿ ಪೆಟ್ರೋಲ್ 106.03 ರೂ ಮತ್ತು ಡೀಸೆಲ್ ಲೀಟರ್ ಗೆ 92.76 ರೂ ಆಗಿದೆ. ಸರ್ಕಾರಿ ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪರಿಶೀಲಿಸಿದ ನಂತರ ದರವನ್ನು ನಿಗದಿಪಡಿಸುತ್ತವೆ.