ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಮರಕ್ಕೆ ಡಿಕ್ಕಿ-ಕಂಟೈನರ್ ಲಾರಿ ಮೇಲೆಯೇ ಉರುಳಿ ಬಿದ್ದ ಮರ…

182
firstsuddi

ಚಿಕ್ಕಬಳ್ಳಾಪುರ : ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ಕಂಟೈನರ್ ಲಾರಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಲಾರಿ ಮೇಲೆಯೇ ಮರ ಉರುಳಿ ಬಿದ್ದಿರುವ ಘಟನೆ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಕನಸವಾಡಿಯ ದೊಡ್ಡಬೆಳವಂಗಲ ಕ್ರಾಸ್ ಬಳಿ ನಡೆದಿದೆ. ದೊಡ್ಡಬೆಳವಂಗಲ ಕ್ರಾಸ್ ಬಳಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಚಾಲಕ ಲಾರಿಯನ್ನು ಅಡ್ಡಾ-ದಿಡ್ಡಿ ಚಲಾಯಿಸಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಲಾರಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಮರ ಮುರಿದು ಕಂಟೈನರ್ ಮೇಲೆಯೇ ಬಿದ್ದಿದ್ದು, ಅದೃಷ್ಟಾವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.