ಹುಬ್ಬಳ್ಳಿ : ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದೆ. ಹುಬ್ಬಳ್ಳಿಯಲ್ಲಿ ನಡೆದ ಗಲಭೆಯ ಪ್ರಮುಖ ಆರೋಪಿಯಾಗಿರುವ ಅಭಿಷೇಕ್ ಹಿರೇಮಠ ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದು, ಪೊಲೀಸ್ ಬಿಗಿ ಭದ್ರತೆಯಲ್ಲಿ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿದ್ದಾನೆ.
ವಿವಾದಾತ್ಮಕ ಪೋಸ್ಟ್ ಮಾಡುವ ಮೂಲಕ ಹಳೇ ಹುಬ್ಬಳ್ಳಿ ಗಲಭೆಗೆ ಕಾರಣವಾಗಿದ್ದ ಅಭಿಷೇಕ್ ಹಿರೇಮಠ ಅಶೋಕನಗರದ ಉಪ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ. ಇದೀಗ ಅಭಿಷೇಕ್‍ಗೆ ಪರೀಕ್ಷೆ ಬರೆಯಲು ಕೋರ್ಟ್ ಅನುಮತಿ ನೀಡಿದೆ. ಈ ಹಿನ್ನೆಲೆ ಕಾಮರ್ಸ್ ವಿದ್ಯಾರ್ಥಿಯಾಗಿರುವ ಅಭಿಷೇಕ್ ಮಹೇಶ್ ಪಿಯು ಕಾಲೇಜಿನಲ್ಲಿ ಬಿಸಿನೆಸ್ ಸ್ಟಡೀಸ್ ವಿಷಯದ ಪರೀಕ್ಷೆ ಬರೆಯಲಿದ್ದಾನೆ. ಅಭಿಷೇಕ್‍ಗೆ ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿ ವ್ಯವಸ್ಥೆ ಜತೆಗೆ ಸೂಕ್ತ ಭದ್ರತೆ ನಿಯೋಜನೆ ಮಾಡಲಾಗಿದೆ.










