ಪೌರತ್ವ ತಿದ್ದುಪಡಿ ಕಾಯ್ದೆ : ರಾಜ್ಯದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವುದನ್ನು ಪ್ರಶ್ನಿಸಿ ಹೈಕೋರ್ಟ್‍ಗೆ ಮೇಲ್ಮನವಿ ಅರ್ಜಿ ಸಲ್ಲಿಕೆ

182
firstsuddi

ಬೆಂಗಳೂರು : ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ಹೆಚ್ಚಾಗುತ್ತಿದ್ದಂತೆ ಕರ್ನಾಟಕದಲ್ಲಿ ಸಿಆರ್‍ಪಿಸಿ ಸೆಕ್ಷನ್ 144ರಂತೆ ಇಂದಿನಿಂದ 3ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಿರುವ ಸರ್ಕಾರ ಮತ್ತು ಪೊಲೀಸ್ ಇಲಾಖೆಯ ನಡೆಯನ್ನು ಪ್ರಶ್ನಿಸಿ ಕಾಂಗ್ರೆಸ್ ಶಾಸಕಿ ಸೌಮ್ಯಾ ರೆಡ್ಡಿ ಹಾಗೂ ರಾಜ್ಯಸಭೆಯ ಸದಸ್ಯರಾದ ರಾಜೀವ್ ಗೌಡ ಅವರು ಹೈಕೋರ್ಟ್‍ಗೆ ಮೇಲ್ಮನವಿ ಅರ್ಜಿಯನ್ನು ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡ ಮುಖ್ಯ. ನ್ಯಾಯಮೂರ್ತಿ ಅಭಯ್ ಓಕಾ ಮತ್ತು ನ್ಯಾಯಮೂರ್ತಿ ಪ್ರದೀಪ್ ಸಿಂಗ್ ಯೆರೂರ್ ಅವರು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಿದ್ದಾರೆ.