ನವದೆಹಲಿ : ರೈತರ ಪ್ರತಿಭಟನೆ ವೇಳೆ ಪೊಲೀಸರ ಕ್ರಮದಿಂದಾಗಿ ಯಾವುದೇ ರೈತರು ಸಾವನ್ನಪ್ಪಿಲ್ಲ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಹೇಳಿದ್ದಾರೆ.
ಪ್ರತಿಭಟನೆ ಸಮಯದಲ್ಲಿ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಪರಿಹಾರವನ್ನು ತಲುಪಿಸಲು ಕೇಂದ್ರ ಸರ್ಕಾರ ಯೋಜಿಸುತ್ತಿದೆಯೇ ಎಂದು ಕಾಂಗ್ರೆಸ್ ನಾಯಕ ಧೀರಜ್ ಪ್ರಸಾದ್ ಸಾಹು ಮತ್ತು ಎಎಪಿ ನಾಯಕ ಸಂಜಯ್ ಸಿಂಗ್ ಅವರ ಜಂಟಿ ಪ್ರಶ್ನೆಗೆ ನಿನ್ನೆ ರಾಜ್ಯಸಭೆಯಲ್ಲಿ ತೋಮರ್ ಪ್ರತಿಕ್ರಿಯಿಸಿದ್ದಾರೆ.
ಪ್ರತಿಭಟನೆ ಸಮಯದಲ್ಲಿ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಪರಿಹಾರ ತಲುಪಿಸುವ ಕಾರ್ಯವನ್ನು ಆಯಾ ರಾಜ್ಯ ಸರ್ಕಾರಗಳು ನಿರ್ವಹಿಸಬೇಕು.ಪೊಲೀಸ್ ಕ್ರಮದಿಂದ ಯಾವುದೇ ರೈತರು ಸಾವನ್ನಪ್ಪಿಲ್ಲ ಎಂದು ತೋಮರ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಇನ್ನೂ ಗುರುವಾರ ಕೇಂದ್ರ ಸರ್ಕಾರ ರೈತರ ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದಾಗಿ ತಿಳಿಸಿದ್ದು, ರೈತರು ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ.










