ಪ್ರತಿಭಟನೆ ವೇಳೆ ಪೊಲೀಸ್ ವಾಹನಕ್ಕೆ ಕಲ್ಲು ತೂರಾಟ – ರಮಾಕಾಂತ್ ಕೊಂಡೂಸ್ಕರ್, ಶುಭಂ ಶೆಳ್ಕೆ ಸೇರಿ 27 ಮಂದಿ ಅರೆಸ್ಟ್…

54
firstsuddi

ಬೆಳಗಾವಿ: ಬೆಂಗಳೂರಿನ ಸ್ಯಾಂಕಿ ಕೆರೆ ಬಳಿ ಇರುವ ಶಿವಾಜಿ ಪುತ್ಥಳಿಗೆ ಕಪ್ಪು ಮಸಿ ಸುರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಡರಾತ್ರಿ ತಡರಾತ್ರಿ ಹಿಂದೂಪರ ಸಂಘಟನೆಗಳು ದಿಢೀರ್ ಪ್ರತಿಭಟನೆ ನಡೆಸಿದ್ದವು. ಈ ವೇಳೆ ಪೊಲೀಸರ ಮೇಲೆ ಮತ್ತು ಪೊಲೀಸ್ ವಾಹನಗಳು ಸೇರಿದಂತೆ ನಗರದ ಕೆಲವು ವಾಹನಗಳ ಮೇಲೆ ಕೆಲ ಪುಂಡರು ಕಲ್ಲು ತೂರಾಟ ನಡೆಸಿದ್ದರು. ಅಷ್ಟೇ ಅಲ್ಲದೇ ಸಂಗೊಳ್ಳಿ ರಾಯಣ್ಣನ ವಿಗ್ರಹ ಕೆಡವಿದ್ದರು. ಪೊಲೀಸ್ ವಾಹನ ಸೇರಿ 20ಕ್ಕೂ ಹೆಚ್ಚು ವಾಹನಗಳ ಮೇಲೆ ಪುಂಡರು ಕಲ್ಲು ತೂರಾಟ ನಡೆಸಿರುವ ಘಟನೆ ಸಿಸಿಟವಿಯಲ್ಲಿ ಸೆರೆಯಾಗಿದೆ. ಈ ವಿಡಿಯೋ ಆಧರಿಸಿ ಪೊಲೀಸರು ಶ್ರೀರಾಮಸೇನೆ ಹಿಂದೂಸ್ತಾನ್ ಸಂಘಟನೆ ಅಧ್ಯಕ್ಷ ರಮಾಕಾಂತ್ ಕೊಂಡುಸ್ಕರ್, ಎಂಇಎಸ್ ಮುಖಂಡ ಶುಭಂ ಶೆಳ್ಕೆ ಸೇರಿ 27 ಪುಂಡರನ್ನು ಹೆಡೆಮುರಿ ಕಟ್ಟಿದ್ದಾರೆ.

ಈ ಘಟನೆ ಕುರಿತು ಮೂರು ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿತ್ತು. ರಾತ್ರೋರಾತ್ರಿ ಕಾರ್ಯಾಚರಣೆ ಕೈಗೊಂಡ ಪೊಲೀಸರು ಘಟನೆಗೆ ಸಂಬಂಧಿಸಿದಂತೆ ಎಂಇಎಸ್ ಮುಖಂಡ ಶುಭಂ ಶೆಳ್ಕೆ ಮತ್ತು ರಮಾಕಾಂತ್ ಕೊಂಡುಸ್ಕರ್ ಸೇರಿದಂತೆ 27ಕ್ಕೂ ಹೆಚ್ಚು ಎಂಇಎಸ್ ಪುಂಡರನ್ನು ಬಂಧಿಸಿ ತಡರಾತ್ರಿ ಜಡ್ಜ್ ಎದುರು ಹಾಜರುಪಡಿಸಿದ್ದರು. ಬಳಿಕ 27 ಜನರನ್ನು ಬಂಧಿಸಿದ ಪೊಲೀಸರು ಹಿಂಡಲಗಾ ಜೈಲಿಗಟ್ಟಿದ್ದಾರೆ.