ಪ್ರತಿಯೊಬ್ಬ ಸಂತ್ರಸ್ಥರಿಗೆ ಸರ್ಕಾರದ ಸೌಲಭ್ಯಗಳು ದೊರೆಯಬೇಕು- ಮುಖ್ಯಮಂತ್ರಿ ಕುಮಾರಸ್ವಾಮಿ

294

ಕೊಡಗು – ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಕೃತಿ ವಿಕೋಪ ಪರಿಹಾರ ಕಾರ್ಯಗಳ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ,  ಸಂತ್ರಸ್ಥರಿಗೆ ನೆಲೆ ಕಲ್ಪಿಸುವುದರ ಜೊತೆಗೆ ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗ ಕಲ್ಪಿಸಲುಬೇಕು ಆ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪ್ರತಿಯೊಬ್ಬ ಸಂತ್ರಸ್ಥರಿಗೆ ಸರ್ಕಾರದ ಸೌಲಭ್ಯಗಳು ದೊರೆಯಬೇಕು. ಯಾವುದೇ ಕಾರಣಕ್ಕೂ ಸರ್ಕಾರದಿಂದ ಸ್ಪಂದನೆ ಸಿಗುತ್ತಿಲ್ಲ ಎಂಬ ದೂರುಗಳು ಕೇಳಿಬರಬಾರದು, ಆ ನಿಟ್ಟಿನಲ್ಲಿ ಕರ್ತವ್ಯ ಪ್ರಜ್ಞೆ ಅರಿತು ಅಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಬೇಕು  ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ  ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ  ಅವರು ಮಾತನಾಡಿ ಸುಮಾರು 50 ಸಾವಿರ ಜನ ಮಳೆಯಿಂದ ತೊಂದರೆಗೀಡಾಗಿದ್ದಾರೆ. 7 ಜನರು ಮೃತಪಟ್ಟಿದ್ದಾರೆ ಜಿಲ್ಲೆಯಾದ್ಯಂತ ಇದುವರೆಗೆ ಒಟ್ಟು 3,120 ಸಂತ್ರಸ್ತರನ್ನು ರಕ್ಷಿಸಿದ್ದು. 41 ಪರಿಹಾರ ಕೇಂದ್ರಗಳನ್ನು ತೆರೆದಿದ್ದು ಈ ಕೇಂದ್ರಗಳಲ್ಲಿ ಸಂತ್ರಸ್ತರಿಗೆ ಊಟ, ಕುಡಿಯುವ ನೀರು, ವೈದ್ಯಕೀಯ ಸೌಲಭ್ಯ, ಹಾಸಿಗೆ ಮತ್ತು ಹೊದಿಕೆ ಮತ್ತಿತರ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದರು. ಜಿಲ್ಲಾ ಉಸ್ತುವಾರಿ ಸಚಿವರಾದ ಸಾ.ರಾ.ಮಹೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ.ಪೆನ್ನೇಕರ್, ಮುಖ್ಯಮಂತ್ರಿಯವರ ಆಪ್ತ ಕಾರ್ಯದರ್ಶಿ ಜಿ.ಪ್ರಭು, ಮಾಧ್ಯಮ ಸಲಹೆಗಾರರಾದ ಎಚ್.ಬಿ.ದಿನೇಶ್ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು