ಬೆಂಗಳೂರು : ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಕಾಲೇಜು ಪ್ರಾರಂಭಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಅಲ್ಪಸಂಖ್ಯಾತ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಅವರು ಸ್ಪಷ್ಟಪಡಿಸಿದ್ದಾರೆ.
ಪತ್ರಿಕಾ ಹೇಳಿಕೆ ಮೂಲಕ ಸೃಷ್ಟೀಕರಣ ನೀಡಿರುವ ಅವರು, ಪ್ರತ್ಯೇಕ ಮುಸ್ಲಿಂ ಕಾಲೇಜು ಪ್ರಾರಂಭ ಮಾಡುವ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ. ಸರ್ಕಾರದ ಮುಂದೆ ಕಡತವೂ ಇಲ್ಲ. ಈಗಾಗಲೇ ಕಾಲೇಜು ಪ್ರಾರಂಭಕ್ಕೆ ಅನುಮತಿ ನೀಡಲಾಗಿದೆ ಎಂಬುದು ಸತ್ಯಕ್ಕೆ ದೂರವಾದ ವಿಷಯ. ವಕ್ಫ್ ಬೋರ್ಡ್ ಅಧ್ಯಕ್ಷ ಹೇಳಿಕೆ ಅವರ ವೈಯಕ್ತಿಕ ಹೇಳಿಕೆ. ವಕ್ಫ್ ಬೋರ್ಡ್ ಅಧ್ಯಕ್ಷರ ಜೊತೆ ಮಾತನಾಡಿದ್ದೇನೆ. ವಿವಾದಕ್ಕೆ ಸ್ಪಷ್ಟನೆ ನೀಡಲು ಸೂಚನೆ ನೀಡಿದ್ದೇನೆ ಎಂದು ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.










