ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವಿಟರ್ ಮೂಲಕ ಹಲವಾರು ಪ್ರಶ್ನೆಗಳನ್ನು ಕೇಳಿದ ಕಾಂಗ್ರೆಸ್ ಕರ್ನಾಟಕ…

200
firstsuddi

ಬೆಂಗಳೂರು : ಇಂದು ಪ್ರಧಾನಿ ನರೇಂದ್ರ ಮೋದಿ ಅವರು ತುಮಕೂರಿಗೆ ಆಗಮಿಸುತ್ತಿದ್ದು, ಈ ವೇಳೆ ಕಾಂಗ್ರೆಸ್ ಕರ್ನಾಟಕ ತನ್ನ ಟ್ವಿಟರ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಲವು ಪ್ರಶ್ನೆಗಳನ್ನು ಕೇಳಿದೆ.
• ಪ್ರಧಾನಿ ನರೇಂದ್ರ ಮೋದಿ ಅವರೇ, ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ ‘ಶಿವಕುಮಾರ ಸ್ವಾಮೀಜಿ’ ಅವರು ಲಿಂಗೈಕ್ಯರಾದಾಗ ತುಮಕೂರಿಗೆ ಏಕೆ ಬರಲಿಲ್ಲ?
• ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ( ಮಾಜಿ ಸಿಎಂ ಸಿದ್ದರಾಮಯ್ಯ ಅವರು 2018 ಜನವರಿ 24 ರಂದು ಪತ್ರ ಬರೆದಿದ್ದರು) ಇದುವರೆಗೂ ನೀಡಿಲ್ಲ ಏಕೆ?
• ಭೀಕರ ನೆರೆ ಸಂದರ್ಭದಲ್ಲಿ ರಾಜ್ಯಕ್ಕೆ ಭೇಟಿ ನೀಡಲಿಲ್ಲ ಏಕೆ?
• ₹ 1 ಲಕ್ಷ ಕೋಟಿಗೂ ಹೆಚ್ಚು ನಷ್ಟವಾದರೂ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲಿಲ್ಲ ಏಕೆ? ಮಧ್ಯಂತರ ಪರಿಹಾರ ನೀಡಲಿಲ್ಲ ಏಕೆ?
• ರಾಜ್ಯ ಸರ್ಕಾರವೇ ₹35,300 ಕೋಟಿ ನಷ್ಟ ಆಗಿದೆ ಎಂದು ವರದಿ ನೀಡಿದರೂ ಕೇವಲ ₹1200 ಕೋಟಿ ನೀಡಿ ಸುಮ್ಮನಾಗಿದ್ದು ಏಕೆ?
• ರಾಜ್ಯಕ್ಕೆ ಕೇಂದ್ರದಿಂದ ನೀಡಬೇಕಾದ ತೆರಿಗೆಯ (ಜಿ.ಎಸ್.ಟಿ) ಪಾಲು ಸಮರ್ಪಕವಾಗಿ ನೀಡುತ್ತಿಲ್ಲ ಏಕೆ?
• ರಾಜ್ಯಕ್ಕೆ ಬರಬೇಕಾದ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯ ಬಾಕಿಯನ್ನು ಇದುವರೆಗೂ ಏಕೆ ನೀಡಿಲ್ಲ?
• ಅನುದಾನ ಹಂಚಿಕೆಯಲ್ಲಿ ಕರ್ನಾಟಕವನ್ನು ಕಡೆಗಣಿಸಿರುವುದು ಏಕೆ?
• ಗಡಿ ವಿವಾದದಲ್ಲಿ ಮಹಾರಾಷ್ಟ್ರ – ಕರ್ನಾಟಕ ಬಿಜೆಪಿ ನಾಯಕರು ತದ್ವಿರುದ್ಧ ಹೇಳಿಕೆ ನೀಡಿ ಗೊಂದಲ ಸೃಷ್ಟಿಸುತ್ತಿರುವುದೇಕೆ?
• ಉಭಯ ರಾಜ್ಯಗಳ ನಡುವೆ ಶಾಂತಿ ಸ್ಥಾಪಿಸಬೇಕಾದ ಬಿಜೆಪಿ ನೇತೃತ್ವದ ಕೇಂದ್ರ, ರಾಜ್ಯ ಸರ್ಕಾರಗಳು ರಾಜ್ಯದ ಹಿತಾಸಕ್ತಿಗೆ ವಿರುದ್ಧವಾದ ತಮ್ಮದೇ ಪಕ್ಷದ ಶಾಸಕರ ಹೇಳಿಕೆಯನ್ನು ಖಂಡಿಸುತ್ತಿಲ್ಲ ಏಕೆ?
• ಇದು ಭಾರತ ಗಣರಾಜ್ಯ, ಭಾರತದ ಸಾಂವಿಧಾನದಲ್ಲಿ ಯಾವ ಭಾಷೆಯೂ ರಾಷ್ಟ್ರ ಭಾಷೆಯಲ್ಲ. ಹಾಗಿದ್ದರೂ, ಸಂವಿಧಾನದ 8ನೇ ಪರಿಚ್ಚೇಧದಲ್ಲಿನ ಎಲ್ಲಾ ಭಾಷೆಗಳಿಗೂ ಅಧಿಕೃತ, ಸಮಾನ ಸ್ಥಾನಮಾನ ನೀಡುತ್ತಿಲ್ಲ ಏಕೆ?
• ಜನ ಜೀವನದ ಮಾತೃ ಭಾಷೆಗಳನ್ನು, ಪ್ರಾದೇಶಿಕ ಭಾಷೆಗಳನ್ನ ಕಡೆಗಣಿಸಿ ‘ಹಿಂದಿ’ ಭಾಷೆಯನ್ನು ಹೇರುತ್ತಿರುವುದೇಕೆ?
• ನರೇಂದ್ರ ಮೋದಿ ಅವರೆ, ಈ ಹಿಂದೆ ತುಮಕೂರಿಗೆ ಭೇಟಿ ನೀಡಿ, ಹೇಮಾವತಿ-ನೇತ್ರಾವತಿ ನದಿ ಜೋಡಣೆ ಮಾಡಿ 8 ಜಿಲ್ಲೆಗಳಿಗೆ ಶಾಶ್ವತ ನೀರಾವರಿ ವ್ಯವಸ್ಥೆ ಕಲ್ಪಿಸುವುದಾಗಿ ಹೇಳಿದ್ದಿರಿ, ನದಿ ಜೋಡಣೆ ಪ್ರಕ್ರಿಯೆ ಆರಂಭವಾಗಿದೆಯೇ? ಈಗ ಯಾವ ಹಂತದಲ್ಲಿದೆ? ಆಗಿರುವ ಖರ್ಚು ವೆಚ್ಚಗಳೇನು? ಯೋಜನೆ ಪೂರ್ಣಗೊಳ್ಳುವುದು ಯಾವಾಗ?
• ನರೇಂದ್ರ ಮೋದಿ ಅವರೆ, ಅಚ್ಚೇ ದಿನ್ ಎಲ್ಲಿ? ವಿಕಾಸ್ ಎಲ್ಲಿ? ಕಪ್ಪು ಹಣ ಎಲ್ಲಿ? ಉದ್ಯೋಗ ಸೃಷ್ಟಿ ಎಲ್ಲಿ? ರೈತರ ಆದಾಯ ದ್ವಿಗುಣ ಎಲ್ಲಿ? ಮಹಿಳಾ ಸಬಲೀಕರಣ ಎಲ್ಲಿ? ನಿಮ್ಮ ಮೊದಲ ಪತ್ರಿಕಾಗೋಷ್ಠಿ ಎಲ್ಲಿ? ಎಂದು ಪ್ರಶ್ನೆಗಳನ್ನು ಕೇಳಿ ಕೊನೆಗೆ ಉತ್ತರ ಕೊಡಿ ಮೋದಿ ಎಂದು ಹ್ಯಾಶ್ ಟ್ಯಾಗ್ ಹಾಕಿದೆ.