ನವದೆಹಲಿ : ಯುರೋಪಿನ ದೇಶಗಳೊಂದಿಗೆ ಶಾಂತಿ ಸಮೃದ್ಧಿ, ಸಹಕಾರವನ್ನು ಮತ್ತಷ್ಟು ಬಲಪಡಿಸಲು ಪ್ರಧಾನಿ ನರೇಂದ್ರ ಮೋದಿಯವರು ಬರ್ಲಿನ್, ಡೆನ್ಮಾರ್ಕ್ ಮತ್ತು ಪ್ಯಾರಿಸ್ ಗೆ ಭೇಟಿ ನೀಡುತ್ತಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿ ಕಚೇರಿ, ಜರ್ಮನ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್, ಡೆನ್ಮಾರ್ಕ್ ಪ್ರಧಾನಿ ಮೆಟ್ಟೆ ಫ್ರೆಡೆರಿಕ್ಸೆನ್ ಮತ್ತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಮೋದಿ ಭೇಟಿ ಮಾಡಲಿದ್ದಾರೆ ಎಂದು ತಿಳಿಸಿದೆ.
ಯುರೋಪ್ ಖಂಡ ಭಾರತೀಯ ಮೂಲದ ಒಂದು ಮಿಲಿಯನ್ ಗಿಂತಲೂ ಹೆಚ್ಚು ಜನರಿಗೆ ನೆಲೆಯಾಗಿದೆ ಮತ್ತು ಜರ್ಮನಿಯು ಈ ಸಂಖ್ಯೆಯಲ್ಲಿ ಗಮನಾರ್ಹ ಪ್ರಮಾಣವನ್ನು ಹೊಂದಿದೆ. ಯುರೋಪ್ ನೊಂದಿಗಿನ ನಮ್ಮ ಸಂಬಂಧಗಳಲ್ಲಿ ಪ್ರಮುಖ ಆಧಾರವಾಗಿದೆ ಮತ್ತು ಆದ್ದರಿಂದ ನಾನು ನನ್ನ ಭೇಟಿಯ ಅವಕಾಶವನ್ನು ತೆಗೆದುಕೊಳ್ಳುತ್ತೇನೆ ಅಲ್ಲಿ ನಮ್ಮ ಸಹೋದರ, ಸಹೋದರಿಯರನ್ನು ಭೇಟಿ ಮಾಡುತ್ತೇನೆ ಎಂದು ಪ್ರಧಾನಿ ಹೇಳಿದ್ದಾರೆ.
ಪ್ರಧಾನಿ ಮೋದಿ ಅವರು ಇಂದು ಜರ್ಮನಿಯ ಫೆಡರಲ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರ ಆಹ್ವಾನದ ಮೇರೆಗೆ ಜರ್ಮನಿಯ ಬರ್ಲಿನ್ ಗೆ ಭೇಟಿ ನೀಡಿದ್ದಾರೆ. ನಂತರ ಅವರು ಮೇ 3 ರಿಂದ 4 ಡೆನ್ಮಾರ್ಕ್ ನ ಕೋಪನ್ ಹೇಗನ್ ಗೆ ಪ್ರಯಾಣಿಸಲಿದ್ದಾರೆ. ಭಾರತಕ್ಕೆ ಹಿಂತಿರುಗುವ ವೇಳೆ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಭೇಟಿ ಮಾಡಲಿದ್ದಾರೆ.










