ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹಸಚಿವ ಅಮಿತ್ ಶಾ ಸೇರಿದಂತೆ ರಾಜಕೀಯ ನಾಯಕರಿಂದ ಅಂತಿಮ ನಮನ ಸಲ್ಲಿಕೆ.

37

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಇತರ ರಾಜಕೀಯ ನಾಯಕರು ಇಂದು ಬೆಳಗ್ಗೆ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಿ ಅಚಿತಿಮ ನಮನ ಸಲ್ಲಿಸಿದರು. ಹಾಗೂ ಜೊತೆಗೆ ಕುಟುಂಬದವರಿಗೆ ಸಾಂತ್ವನ ಹೇಳಿದರು. ಗುರುವಾರ ರಾತ್ರಿ ವಧಿವಶರಾದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗೆ ರಾಜಕೀಯ ಕ್ಷೇತ್ರದ ಅನೇಕ ನಾಯಕರು ಸಂತಾಪವನ್ನು ಸೂಚಿಸಿದರು. ತೀವ್ರ ದುಃಖವನ್ನು ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರದ ಪ್ರಗತಿಗೆ ಡಾ. ಸಿಂಗ್ ಅವರ ಅಪಾರ ಕೊಡುಗೆಯನ್ನು ಅಭಿನಂದಿಸಿದರು. “ಡಾ. ಮನಮೋಹನ್ ಸಿಂಗ್ ನಾಯಕರಾಗಿ ಅವರ ಸಮಗ್ರತೆ ಹಾಗೂ ದೃಷ್ಟಿಕೋನ ಭಾರತದ ಇತಿಹಾಸದಲ್ಲಿ ಶಾಶ್ವತವಾಗಿ ಉಳಿಯುತ್ತದೆ” ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ. ಅಂತಿಮ ನಮನ ಸಲ್ಲಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಡಾ. ಸಿಂಗ್ ಒಬ್ಬ ರಾಜನೀತಿಜ್ಞ ಮತ್ತು ಭಾರತದ ಆಧುನಿಕ ಆರ್ಥಿಕ ನೀತಿಗಳನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಒಬ್ಬ ಶ್ರೇಷ್ಠ ಅರ್ಥ ಶಾಸ್ತ್ರಜ್ಞ ಎಂದು ಹೇಳಿದರು. ಉಳಿದಂತೆ ಕಾಂಗ್ರೆಸ್ ನಾಯಕರಾದ ರಾಜ್ಯಸಭಾ ಸಂಸದ ರಾಹುಲ್ ಗಾಂಧಿ, ಸದಸ್ಯೆ ಸೋನಿಯಾ ಗಾಂಧಿ, ಹಾಗೂ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಡಾ. ಸಿಂಗ್ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನವನ್ನು ಸಲ್ಲಿಸಲಾಗಿದೆ. ಬಿಜೆಪಿ ಅಧ್ಯಕ್ಷ ಮತ್ತು ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರು ಗೌರವ ಸಲ್ಲಿಸಿ, ಡಾ. ಮನಮೋಹನ್ ಸಿಂಗ್ ಅವರು ವೃತ್ತಿಜೀವನದುದ್ದಕ್ಕೂ ಸಾರ್ವಜನಿಕ ಸೇವೆಗೆ ತೋರಿಸಿದ ಬದ್ಧತೆಯನ್ನು ಒತ್ತಿ ಹೇಳಿದರು ಹಾಗೂ ಎಲ್ಲಾ ನಾಯಕರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.