ಪ್ರಧಾನಿ ಮೋದಿ ತಾಯಿ ಹೀರಾಬೆನ್ ನಿಧನಕ್ಕೆ ಜೋ ಬೈಡನ್ ಸಂತಾಪ…

70
firstsuddi

ವಾಷಿಂಗ್ಟನ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರ ನಿಧನಕ್ಕೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರ ಸಾವಿಗೆ ಹೃದಯಾಂತರಾಳದ ಸಂತಾಪ ಸೂಚಿಸುತ್ತಿದ್ದೇವೆ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ನೀಡಲಿ ಎಂದು ಜೋ ಬೈಡನ್ ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಮೋದಿ ಅವರು ನಿನ್ನೆ ವಿಧಿವಶರಾಗಿದ್ದಾರೆ. ಕಳೆದ ಜೂನ್ ನಲ್ಲಿ 100 ವರ್ಷ ಪೂರೈಸಿದ್ದ ಮೋದಿ ತಾಯಿ, ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.

ಬುಧವಾರ ಅಹಮದಾಬಾದ್ ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಅವರ ಅವರ ಆರೋಗ್ಯ ಸುಧಾರಿಸಿರುವುದಾಗಿ ಆಸ್ಪತ್ರೆ ಮೂಲಗಳು ತಿಳಿಸಿದ್ದವು. ಇದಾದ ಕೆಲವೇ ಗಂಟೆಗಳಲ್ಲಿ ಪ್ರಧಾನಿ ಮೋದಿ ತಾಯಿ ಕೊನೆಯುಸಿರೆಳೆದರು.