ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಮೇಲೆ ಅನುಮಾನಾಸ್ಪದವಾಗಿ ಡ್ರೋನ್ ಹಾರಾಟ ನಡೆಸಿದ್ದು, ಈ ಸಂಬಂಧ ದೆಹಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸ ರೆಡ್ ನೋ ಫ್ಲೈ ಝೋನ್ ಅಥವಾ ನೋ ಡ್ರೋನ್ ಝೋನ್ ಅಡಿಯಲ್ಲಿ ಬರುತ್ತದೆ. ಇಂದು ಬೆಳಗ್ಗೆ ಸುಮಾರು 5 ಗಂಟೆ ವೇಳೆಗೆ ಮೋದಿ ನಿವಾಸದ ಮೇಲೆ ಡ್ರೋನ್ ಸುಳಿದಾಡಿದೆ ಎನ್ನಲಾಗಿದೆ.
ದೆಹಲಿ ಪೊಲೀಸರು ಡ್ರೋನ್ ಪತ್ತೆ ಹಚ್ಚಲು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಆದರೆ ಇದುವರೆಗೆ ಯಾವುದೇ ಡ್ರೋನ್ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ.










