ಶ್ರೀಲಂಕಾ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಹಿಂದಾ ರಾಜಪಕ್ಸ.

71
firstsuddi

ಕೊಲಂಬೊ : ಶ್ರೀಲಂಕಾದಲ್ಲಿ ತಲೆದೋರಿರುವ ಆರ್ಥಿಕ ಸಂಕಷ್ಟವನ್ನು ನೀಗಿಸುವಲ್ಲಿ ವಿಫಲರಾದ ಹಿನ್ನಲೆ ಪ್ರಧಾನಿ ಹುದ್ದೆಗೆ ಮಹಿಂದಾ ರಾಜಪಕ್ಸ ರಾಜೀನಾಮೆ ನೀಡಿದ್ದಾರೆ.

ಈಚೆಗೆ ನಡೆದ ವಿಶೇಷ ಸಂಪುಟ ಸಭೆಯಲ್ಲಿ ಅಧ್ಯಕ್ಷ ಗೋಟಬಯ ರಾಜಪಕ್ಸ ಅವರು ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಲು ಮಹಿಂದಾ ರಾಜಪಕ್ಸ ಅವರ ಬಳಿಕ ಮನವಿ ಮಾಡಿದ್ದರು. ಇದಕ್ಕೆ ಮಹಿಂದಾ ರಾಜಪಕ್ಸ ಸಮ್ಮತಿ ಸೂಚಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ್ದವು. ಇದರ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ದೇಶ ಆರ್ಥಿಕವಾಗಿ ದಿವಾಳಿಯಾದ ಕಾರಣ ಪ್ರವಾಸಿಗರ ಸಂಖ್ಯೆಯೂ ಕ್ಷೀಣಿಸಿದೆ. ಇದಲ್ಲದೇ, ಕಾರ್ಖಾನೆಗಳ ಮುಚ್ಚುವಿಕೆಯು ಗಾಯದ ಮೇಲೆ ಬರೆ ಎಳೆದಂತಾಗಿದೆ.