ಶಿವಮೊಗ್ಗ : ಲಾರಿಯೊಂದು ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ ನಾಲ್ವರು ಸಾವನಪ್ಪಿದ್ದು, ಐದು ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಜಿಲ್ಲೆಯ ತಿರ್ಥಹಳ್ಳೀ ತಾಲ್ಲೂಕಿನ ಆಗುಂಬೆ 9 ನೇ ತಿರುವಿನಲ್ಲಿ ಇಂದು ಸಂಜೆ ನಡೆದಿದ್ದು, ಗಾಯಾಳುಗಳನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯಲ್ಲಿ ಮೃತಪಟ್ಟವರ ಹಾಗೂ ಗಾಯಗೊಂಡವರ ಹೆಸರು ತಿಳಿದುಬಂದಿಲ್ಲ. ಸ್ಥಳಕ್ಕೆ ಆಗುಂಬೆ ಹಾಗೂ ಹೆಬ್ರಿ ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ.










