ಪ್ರವೀಣ್ ನೆಟ್ಟಾರು ಕೊಲೆ : ಮೂರು ತಾಲೂಕುಗಳಲ್ಲಿ ಸೆಕ್ಷನ್ 144 ಜಾರಿ…

83
firstsuddi

ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಬಳಿಕ ಸುಳ್ಯ, ಕಡಬ ಹಾಗು ಪುತ್ತೂರು ತಾಲೂಕುಗಳಲ್ಲಿ ಬಿಗುವಿನ ವಾತಾವರಣವಿದೆ. ಈ ಹಿನ್ನಲೆಯಲ್ಲಿ ಮೂರು ತಾಲ್ಲೂಕುಗಳಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದೆ.

ಪುತ್ತೂರು ವಿಭಾಗಾಧಿಕಾರಿ ಗಿರೀಶ್ ನಂದನ್ ಆದೇಶ ಹೊರಡಿಸಿದ್ದಾರೆ. ಘರ್ಷಣೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ಮಧ್ಯರಾತ್ರಿ 12 ಗಂಟೆವರೆಗೆ ನಿಷೇಧಾಜ್ಞೆ ಇರಲಿದೆ. 5ಕ್ಕಿಂತ ಹೆಚ್ಚು ಜನ ಗುಂಪು ಸೇರದಂತೆ ಆದೇಶದಲ್ಲಿ ತಿಳಿಸಲಾಗಿದೆ. ಪುತ್ತೂರಿನ ಎರಡು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಡಬ, ಬೆಳ್ಳಾರೆ ಪೇಟೆಗಳು ಸಂಪೂರ್ಣ ಬಂದ್ ಆಗಿವೆ.

ಈಗಾಗಲೇ ಪ್ರವೀಣ್ ಮೃತದೇಹವನ್ನು ಪುತ್ತೂರು ನಗರದಿಂದ ಮೆರವಣಿಗೆ ಮೂಲಕ ದರ್ಬೆ, ಸವಣೂರು ಕಾಣಿಯೂರು, ನಿಂತಿಕಲ್ಲು ಮಾರ್ಗವಾಗಿ ಬೆಳ್ಳಾರೆಗೆ ಕೊಂಡೊಯ್ಯಲಾಗುತ್ತಿದೆ. ಸಾರ್ವಜನಿಕರ ಅಂತಿಮ ದರ್ಶನದ ಬಳಿಕ ಬಿಲ್ಲವ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ.