ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿ ಶಾಫಿ ಬೆಳ್ಳಾರೆಗೆ ಎಸ್‌ಡಿಪಿಐ ಟಿಕೆಟ್…

93
firstsuddi

ಮಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ಶಾಫಿ ಬೆಳ್ಳಾರೆಗೆ ಎಸ್‌ಡಿಪಿಐ ವಿಧಾನಸಭಾ ಚುನಾವಣೆಗೆ ಪುತ್ತೂರಿನಿಂದ ಟಿಕೆಟ್ ಘೋಷಿಸಿದೆ. ಸದ್ಯ ಇದು ವಿವಾದಕ್ಕೆ ಎಡೆ ಮಾಡಿಕೊಟ್ಟಿದೆ.

ಪುತ್ತೂರು ವಿಧಾನ ಸಭಾ ಕ್ಷೇತ್ರದಿಂದ ಶಾಫಿ ಬೆಳ್ಳಾರೆ ಅವರನ್ನು ಕಣಕ್ಕಿಳಿಸುವುದಾಗಿ ಎಸ್‌ಡಿಪಿಐ ಕಾರ್ಯಕರ್ತರ ಸಮಾವೇಶದಲ್ಲಿ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಎಸ್ ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಖಾನ್, ಶಾಫಿ ಬೆಳ್ಳಾರೆಗೆ ಟಿಕೆಟ್ ಕೊಡಿ ಎಂದು ನಮ್ಮ ಕಾರ್ಯಕರ್ತರು ಹೇಳಿದ್ದಾರೆ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಉದ್ದೇಶಪೂರ್ವಕವಾಗಿ ಶಾಫಿ ಹೆಸರನ್ನು ಸೇರಿಸಲಾಗಿದೆ. ಶಾಫಿ ರಾಜಕೀಯವಾಗಿ ಬೆಳೆಯುತ್ತಾರೆ ಎಂಬ ಕಾರಣಕ್ಕೆ ಅವರ ಮೇಲೆ ಕೊಲೆ ಆರೋಪ ಮಾಡಲಾಗಿದೆ. ಈ ಪ್ರಕರಣದಲ್ಲಿ ಶಾಫಿ ಕೇವಲ ಆರೋಪಿ, ಅವರ ಪರವಾಗಿ ನಿಲ್ಲುವ ಸಲುವಾಗಿ ಟಿಕೆಟ್ ಕೊಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಸದ್ಯ ಪ್ರವೀಣ್ ನೆಟ್ಟಾರ್ ಪ್ರಕರಣದಲ್ಲಿ ಎನ್‍ಐಎ ಬಂಧನದಲ್ಲಿರುವ ಶಾಫಿ ಬೆಳ್ಳಾರೆ, ಜೈಲಿನಿಂದಲೇ ಚುನಾವಣೆಗೆ ಸ್ಪರ್ಧಿಸಲಿದ್ದಾರೆ.