ಪ್ರವೀಣ್ ಹತ್ಯೆ ಖಂಡಿಸಿ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರ ಸಾಮೂಹಿಕ ರಾಜೀನಾಮೆ…

85
firstsuddi

ಚಿಕ್ಕಮಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಕೊಲೆಯನ್ನು ಖಂಡಿಸಿ ಚಿಕ್ಕಮಗಳೂರು ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ನೀಡಿದ್ದಾರೆ.

ಹಿಂದುತ್ವದ ಆಧಾರದ ಮೇಲೆ ಅಧಿಕಾರಕ್ಕೆ ಬಂದ ಬಿಜೆಪಿಗೆ ಹಿಂದೂ ಕಾರ್ಯಕರ್ತರು ಹಾಗೂ ಪಕ್ಷದ ಕಾರ್ಯಕರ್ತರನ್ನ ಉಳಿಸಿಕೊಳ್ಳಲು ಆಗದಿರುವುದು ದುರಂತ ಎಂದು ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಬಿಜೆಪಿ ಸರ್ಕಾರದ ವಿರುದ್ಧವೇ ಕಿಡಿಕಾರಿದ್ದಾರೆ. ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂದೀಪ್ ಅರವಿನಗಂಡಿ, ಪ್ರಧಾನ ಕಾರ್ಯದರ್ಶಿ ಸಂತೋಷ್, ಗಗನ್ ಕಡೂರು, ಉಪಾಧ್ಯಕ್ಷ ಸಚಿನ್, ಜಿಲ್ಲಾ ಕಾರ್ಯದರ್ಶಿ ಶಶಿ, ಮಂಡಲ ಅಧ್ಯಕ್ಷ ರಾಜೇಶ್, ಕಾಂಚನ್ ಗೌಡ ಸೇರಿದಂತೆ 30ಕ್ಕೂ ಹೆಚ್ಚು ಕಾರ್ಯಕರ್ತರು ರಾಜೀನಾಮೆ ನೀಡಿದ್ದಾರೆ.

ಇತ್ತ ಬಾಗಲಕೋಟೆಯಲ್ಲೂ ಕೂಡ ಬಿಜೆಪಿ ಜಿಲ್ಲಾ ಯುವ ಮೋರ್ಚಾದ ಕಾರ್ಯಕರ್ತರೆಲ್ಲರು ಸಾಮಾಹಿಕವಾಗಿ ರಾಜೀನಾಮೆ ನೀಡಿದ್ದಾರೆ. ಯುವ ಮೋರ್ಚಾದಿಂದ ಸಭೆ ನಡೆಸಿದ ಬಳಿಕ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಆನಂದ ಇಂಗಳಗಾಂವಿ ಹಾಗೂ ಪ್ರಧಾನ ಕಾರ್ಯದರ್ಶಿ ಭುವನೇಶ್ವರ ಪೂಜಾರ್ ಹೇಳಿದ್ದಾರೆ.

ಜಿಲ್ಲೆಯ ಯುವ ಮೋರ್ಚಾದ 12 ಮಂಡಳಗಳ ಪದಾಧಿಕಾರಿಗಳು, ಕಾರ್ಯಕರ್ತರು ರಾಜೀನಾಮೆ ನೀಡಿದ್ದು, ಬಾಗಲಕೋಟೆ ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.