ಪ್ರಶ್ನೆಗೆ ಉತ್ತರಿಸದ ಜಿಲ್ಲಾಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ನಿರ್ಮಲಾ ಸೀತಾರಾಮನ್.

43
firstsuddi

ಹೈದರಾಬಾದ್ : ನ್ಯಾಯಬೆಲೆ ಅಂಗಡಿಗಳಲ್ಲಿ ವಿತರಿಸಲಾಗುವ ಅಕ್ಕಿಯಲ್ಲಿ ಕೇಂದ್ರ ಮತ್ತು ರಾಜ್ಯದ ಪಾಲು ಎಷ್ಟು ಎಂಬ ಪ್ರಶ್ನೆಗೆ ಉತ್ತರಿಸದ ಜಿಲ್ಲಾಧಿಕಾರಿಯನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.

ತೆಲಂಗಾಣದ ಬಿಕ್ರೂರ್ ನಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆ(ಪಿಡಿಎಸ್) ಪಡಿತರ ಪರಿಶೀಲನೆ ವೇಳೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಜಿಲ್ಲಾಧಿಕಾರಿ ಜಿತೇಶ್ ಪಾಟೀಲ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಚಿತ್ರ ಇಲ್ಲಿ ಯಾಕೆ ಇಲ್ಲ ಎಂದು ಕೇಳಿದ್ದರು. ಬಳಿಕ ನ್ಯಾಯಬೆಲೆ ಅಂಗಡಿಗಳ ಮೂಲಕ ಸರಬರಾಜು ಮಾಡುವ ಅಕ್ಕಿಯಲ್ಲಿ ಕೇಂದ್ರ ಮತ್ತು ರಾಜ್ಯದ ಪಾಲು ಎಷ್ಟು ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ಜಿಲ್ಲಾಧಿಕಾರಿ ಉತ್ತರಿಸಲು ತಡಪಡಿಸಿದ್ದು, ಇದಕ್ಕೆ ಗರಂ ಆದ ಸೀತಾರಾಮನ್ ತರಾಟೆಗೆ ತೆಗೆದುಕೊಂಡಿದ್ದಾರೆ.

ಜಿಲ್ಲಾಧಿಕಾರಿಗೆ ಸಚಿವೆ ನಿರ್ಮಲಾ ಸೀತಾರಾಮನ್ ಛೀಮಾರಿ ಹಾಕಿದ್ದಕ್ಕೆ ತೆಲಂಗಾಣ ಸಚಿವ ಕೆಟಿ ರಾಮರಾವ್ ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಎಫ್ ಎಂ ನಿರ್ಮಲಾ ಸೀತಾರಾಮನ್ ಅವರು ಜಿಲ್ಲಾಧಿಕಾರಿ/ಕಾಮರೆಡ್ಡಿಯ ಕಲೆಕ್ಟರ್ ಅವರೊಂದಿಗೆ ನಡೆದುಕೊಂಡ ರೀತಿಯಿಂದಾಗಿ ನಾನು ದಿಗ್ಭ್ರಮೆಗೊಂಡಿದ್ದೇನೆ. ಉನ್ನತ ಹುದ್ದೆಗಳನ್ನು ಹೊಂದಿರುವ ಜನರ ಇಂತಹ ನಡವಳಿಕೆಯು ಕಠಿಣ ಪರಿಶ್ರಮಿ ಎಐಎಸ್ ಅಧಿಕಾರಿಗಳನ್ನು ನಿರಾಶೆಗೊಳಿಸುತ್ತದೆ ಎಂದು ಹೇಳಿದ್ದಾರೆ.