ತುಮಕೂರು : ಹಲವು ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕಿಂಗ್ ಪಿನ್ ಆಗಿದ್ದ ಶಿವಕುಮಾರ್(65) ಅವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಬಿದರೆಕಾಗ್ಗೆರೆ ಮೂಲದ ಶಿವಕುಮಾರ್ ಅವರು ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರಿಂದ ಕೊರಟಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ನಿನ್ನೆ ಸಾವನ್ನಪ್ಪಿದ್ದಾರೆ.
ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ, ಪೊಲೀಸ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳ ಸೋರಿಕೆಯಲ್ಲಿ ಪ್ರಮುಖ ಆರೋಪಿಯಾಗಿ ಶಿವಕುಮಾರ್ ವಿಚಾರಣೆ ಎದುರಿಸುತ್ತಿದ್ದರು.










