ಪ್ರಾಥಮಿಕ ಸದಸ್ಯತ್ವದಿಂದ ಸಲೀಂ ಉಚ್ಚಾಟನೆ – ಉಗ್ರಪ್ಪಗೆ ಶೋಕಾಸ್ ನೋಟಿಸ್…

81
firstsuddi

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದ ಕೆಪಿಸಿಸಿ ಮಾಧ್ಯಮ ಸಮನ್ವಯಕಾರ ಸಲೀಂ ಅವರನ್ನ ಪಕ್ಷದಿಂದ ಉಚ್ಚಾಟಿಸಲಾಗಿದೆ.

ನಿನ್ನೆ ನಡೆದ ಸಂಭಾಷಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಪಕ್ಷ ತ್ವರಿತವಾಗಿ ಈ ತೀರ್ಮಾನ ಕೈಗೊಂಡಿದೆ. ತಕ್ಷಣಕ್ಕೆ ಜಾರಿಗೆ ಬರುವಂತೆ ಆರು ವರ್ಷ ಅವಧಿಗೆ ಉಚ್ಚಾಟಿಸಿ ಕಾಂಗ್ರೆಸ್ ಪಕ್ಷದ ಶಿಸ್ತು ಸಮಿತಿ ಅಧ್ಯಕ್ಷ ಕೆ.ರಹಮಾನ್ ಖಾನ್ ಆದೇಶ ಹೊರಡಿಸಿದ್ದಾರೆ. ಪ್ರಾಥಮಿಕ ಸದಸ್ಯತ್ವದಿಂದ ಪ್ರಸ್ತುತ ಉಚ್ಚಾಟಿಸಲಾಗಿದ್ದು, ಸಂಭಾಷಣೆ ವಿಚಾರವಾಗಿ ಸಮಗ್ರ ತನಿಖೆ ನಡೆದ ಬಳಿಕ ಪಕ್ಷ ಮುಂದಿನ ತೀರ್ಮಾನ ಕೈಗೊಳ್ಳಲಿದೆ.

ಇನ್ನೂ ಕಾಂಗ್ರೆಸ್ ಶಿಸ್ತು ಸಮಿತಿ ಮಾಜಿ ಸಂಸದ ವಿ.ಎಸ್.ಉಗ್ರಪ್ಪಗೆ ಶೋಕಾಸ್ ನೋಟಿಸ್ ನೀಡಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಘನತೆ ಗೌರವಗಳಿಗೆ ಕುಂದುಂಟಾಗುವಂತೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಅಪಾರ ಹಾನಿ ಉಂಟಾಗುವಂತಹ ಅನೇಕ ವಿಚಾರಗಳನ್ನು ಮಾತನಾಡಿ ಕೊಂಡಿರುವುದು ದೃಶ್ಯ ಮಾಧ್ಯಮಗಳಲ್ಲಿ ವರದಿಯಾದ ಹಿನ್ನೆಲೆಯಲ್ಲಿ ತಾವು ತಮ್ಮ ಈ ಮೇಲಿನ ನಡವಳಿಕೆಯ ಬಗ್ಗೆ ತಕ್ಷಣ ಸಮಜಾಯಿಷಿಯನ್ನು ಮೂರು ದಿನಗೊಳಗಾಗಿ ನೀಡಬೇಕಾಗಿ ಸೂಚಿಸಲಾಗಿದೆ.