ಆನೇಕಲ್: ಮಗಳು ಪ್ರಿಯಕರನ ಜೊತೆ ಮನೆಬಿಟ್ಟು ಹೋಗಿದ್ದಕ್ಕೆ ಮನನೊಂದು ವ್ಯಕ್ತಿಯೊಬ್ಬ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದ ಚಿಕ್ಕಕೆರೆ ಅಂಗಳದಲ್ಲಿ ನಡೆದಿದೆ.
ನಾರಾಯಣಪುರ ಗ್ರಾಮದ ನಿವಾಸಿ ಗೋಪಾಲ್ ನೇಣಿಗೆ ಶರಣಾದ ವ್ಯಕ್ತಿ. ಗೋಪಾಲ್ ನೇಕಾರಿಕೆ ಕೆಲಸ ಮಾಡಿಕೊಂಡಿದ್ದರು. ಕಳೆದ ಎರಡು ದಿನಗಳ ಹಿಂದೆ ಮಗಳು ಮನೆ ಬಿಟ್ಟು ಹೋಗಿದ್ದಳು. ಇದೇ ವಿಚಾರವಾಗಿ ಗೋಪಾಲ್ ಮನನೊಂದಿದ್ದರು.
ನಿನ್ನೆ ಬೆಳಿಗ್ಗೆ ಮನೆಯಿಂದ ಹೊರಹೋಗಿದ್ದ ಗೋಪಾಲ್, ಚಿಕ್ಕಕೆರೆ ಅಂಗಳದಲ್ಲಿನ ಹೊಂಗೆ ಮರಕ್ಕೆ ನೇಣು ಬಿಗಿದುಕೊಂಡು ನೇಣಿಗೆ ಶರಣಾಗಿದ್ದಾರೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.










