ಬೆಂಗಳೂರು : ರಾಜ್ಯದ 15 ಕ್ಷೇತ್ರಗಳಿಗೆ ಚುನಾವಣಾ ಆಯೋಗ ಮತ್ತೆ ಚುನಾವಣಾ ದಿನಾಂಕ ಘೋಷಣೆ ಮಾಡಿದ್ದು, ಡಿ.5ಕ್ಕೆ ಚುನಾವಣೆ ನಡೆಯಲಿದೆ. ಈ ಕುರಿತು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ತಮ್ಮ ಟ್ವಿಟರ್ ಮೂಲಕ ಪ್ರತಿಕ್ರಯಿಸಿದ್ದಾರೆ. ರಾಜ್ಯದ 15 ಕ್ಷೇತ್ರಗಳಿಗೆ ಮತ್ತೆ ಚುನಾವಣೆ ಘೋಷಣೆಯಾಗಿದೆ. ಆದರೆ ಚುನಾವಣಾ ಪ್ರಕ್ರಿಯೆ ಬಗ್ಗೆ ಆಯೋಗಕ್ಕೇ ಸ್ಪಷ್ಟತೆ ಇಲ್ಲ. ನೀತಿ ಸಂಹಿತೆ, ಫಲಿತಾಂಶಗಳ ಬಗ್ಗೆ ಗೊಂದಲಗಳಿವೆ. ನೀತಿ ಸಂಹಿತೆ ಇಲ್ಲದೇ ನ್ಯಾಯಬದ್ಧ ಚುನಾವಣೆ ನಡೆಯುವುದು ಹೇಗೆ? ಫಲಿತಾಂಶದ ಉಲ್ಲೇಖವೇ ಇಲ್ಲದ ಮೇಲೆ ಚುನಾವಣೆ ಏಕೆ? ಸಾಂವಿಧಾನಿಕ ಸಂಸ್ಥೆಯೊಂದು ಈ ಮಟ್ಟದ ಗೊಂದಲದಲ್ಲಿ ಕಾರ್ಯನಿರ್ವಹಿಸುವುದರ ಹಿಂದಿನ ಅರ್ಥವೇನು?ಇಂಥ ಗೊಂದಲದ ಚುನಾವಣೆ ಎಂದೂ ಘೋಷಣೆಯಾಗಿರಲಿಲ್ಲ. ಒಂದು ಆಪರೇಷನ್ ಕಮಲ,ಜನಮನ್ನಣೆಯನ್ನು ಮಾರಿಕೊಳ್ಳುವ ಜನಪ್ರತಿನಿಧಿಗಳ ಪ್ರವೃತ್ತಿ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಷ್ಟೆಲ್ಲ ಅನರ್ಥಗಳನ್ನು ಸೃಷ್ಟಿಸುತ್ತದೆ ಎಂಬುದನ್ನು ಜನತೆ ಗಮನಿಸುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.












